ಹಾಸನ :  ಗಣೇಶ ಮೆರವಣಿಗೆ ವೇಳೆ ಜನರ ಮೇಲೆ ಹರಿದ ಟ್ರಕ್; 9 ಮಂದಿ ಮೃತ್ಯು – vishwanews24

Featured, ರಾಜ್ಯ ನ್ಯೂಸ್

ಹಾಸನ :  ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಭೀಕರ ರಸ್ತೆ ಅಪಘಾತ ; ಟ್ರಕ್ ಹರಿದು 9 ಮಂದಿ ಮೃತ್ಯು

ಹಾಸನ : ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ. ಸುಮಾರು 23ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ.

ಘಟನೆಯ ವಿವರ:

ಈ ಘಟನೆ ರಾತ್ರಿ 8:30ಕ್ಕೆ ರಾಷ್ಟ್ರೀಯ ಹೆದ್ದಾರಿಯ ಮೊಸಳೆಹೊಸಳ್ಳಿ ಬಳಿ ನಡೆದಿದೆ. ಹಾಸನದಿಂದ ಮೈಸೂರಿನ ಕಡೆಗೆ ಸಂಚರಿಸುತ್ತಿದ್ದ ಟ್ರಕ್ ವೊಂದು ಓವರ್‌ಟೇಕ್ ಮಾಡುವ ರಭಸದಲ್ಲಿ ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದು ನಿಯಂತ್ರಣವನ್ನು ಕಳೆದುಕೊಂಡಿದೆ. ನಂತರ ಮೆರವಣಿಗೆಯಲ್ಲಿ ಭಾಗವಹಿಸುತ್ತಿದ್ದ ಗುಂಪಿನ ಮೇಲೆ ನೇರವಾಗಿ ಹರಿದ ಪರಿಣಾಮ ದುರ್ಘಟನೆ ಸಂಭವಿಸಿದೆ.

ಮೆರವಣಿಗೆಯಲ್ಲಿ ಸ್ಥಳೀಯ ಗ್ರಾಮಸ್ಥರು, ವಿದ್ಯಾರ್ಥಿಗಳು ಸೇರಿದಂತೆ ಭಕ್ತರು ಭಾಗವಹಿಸುತ್ತಿದ್ದರು.

ಮೃತರಲ್ಲಿ ಗೊಕುಲ್ (17) ಮತ್ತು ಈಶ್ವರ್ (17) ಎಂಬ ಇಬ್ಬರು ಸ್ಥಳೀಯ ಗ್ರಾಮಸ್ಥರಾಗಿದ್ದಾರೆ.

ಗಾಯಾಳುಗಳಲ್ಲಿ ಹಲವರು ಗಂಭೀರ ಸ್ಥಿತಿಯಲ್ಲಿದ್ದು, ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವು ಗಾಯಾಳುಗಳನ್ನು ಹಾಸನದ ಖಾಸಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಮಾಹಿತಿ ಪ್ರಕಾರ, ಲಾರಿಯ ಚಾಲಕ ರಭಸದಿಂದ ಆಟೋರಿಕ್ಷಾ ಓವರ್‌ಟೇಕ್ ಸಮಯದಲ್ಲಿ ನಿಯಂತ್ರಣ ಕಳೆದುಕೊಂಡಿದ್ದಾನೆ. ಚಾಲಕನನ್ನು ಸ್ಥಳದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Leave a Reply