ಹಾಸನ: ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಸುರಭಿ (24) ಮೃತ ದುರ್ದೈವಿ.
ಹುಣಸೂರಿನ ಸುರಭಿ ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಎಂಬಾತನ ಜತೆ ವಿವಾಹವಾಗಿದ್ದಳು. ನಿನ್ನೆ ಗುರುವಾರ ಅಳಿಯ ದರ್ಶನ್ ಸುರಭಿ ಪೋಷಕರಿಗೆ ಕರೆ ಮಾಡಿ, ನಿಮ್ಮ ಮಗಳು ಲೋ ಬಿಪಿಯಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾನೆ.
ಇತ್ತ ಸುರಭಿ ಪೋಷಕರು, ಪತಿಯೇ ಕೊಲೆ ಮಾಡಿದ್ದಾನೆಂದು ಆರೋಪಿಸಿದ್ದಾರೆ. ದರ್ಶನ್‌ಕ್ಕೆ ಬೇರೊಬ್ಬರ ಜತೆ ಅಕ್ರಮ ಸಂಬಂಧವಿತ್ತು. ಇದನ್ನು ಪ್ರಶ್ನಿಸುತ್ತಿದ್ದ ಸುರಭಿಯನ್ನು ನೇಣುಬಿಗಿದು ಕೊಲೆ ಮಾಡಿ ನಾಟಕವಾಡುತ್ತಿದ್ದಾರೆ ಎಂದು ಸುರಭಿ ಪೋಷಕರು ಗಂಭೀರ ಆರೋಪವನ್ನು ಮಾಡಿದ್ದಾರೆ.
ಮೃತದೇಹವನ್ನು ಶ್ರವಣಬೆಳಗೊಳ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಶ್ರವಣಬೆಳಗೊಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…