Featured

ಹಾಸನ: ಗೃಹಿಣಿ ಅನುಮಾನಾಸ್ಪದ ಸಾವು; ಪತಿಯೇ ಕೊಲೆಗೈದಿರುವ ಶಂಕೆ – Vishwanews24

ಹಾಸನ: ಗೃಹಿಣಿ ಅನುಮಾನಾಸ್ಪದ ಸಾವು; ಪತಿಯೇ ಕೊಲೆಗೈದಿರುವ ಶಂಕೆ

ಹಾಸನ: ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಸುರಭಿ (24) ಮೃತ ದುರ್ದೈವಿ.

ಹುಣಸೂರಿನ ಸುರಭಿ ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಎಂಬಾತನ ಜತೆ ವಿವಾಹವಾಗಿದ್ದಳು. ನಿನ್ನೆ ಗುರುವಾರ ಅಳಿಯ ದರ್ಶನ್‌ ಸುರಭಿ ಪೋಷಕರಿಗೆ ಕರೆ ಮಾಡಿ, ನಿಮ್ಮ ಮಗಳು ಲೋ ಬಿಪಿಯಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾನೆ.

ಇತ್ತ ಸುರಭಿ ಪೋಷಕರು, ಪತಿಯೇ ಕೊಲೆ ಮಾಡಿದ್ದಾನೆಂದು ಆರೋಪಿಸಿದ್ದಾರೆ. ದರ್ಶನ್‌‌ಕ್ಕೆ ಬೇರೊಬ್ಬರ ಜತೆ ಅಕ್ರಮ ಸಂಬಂಧವಿತ್ತು. ಇದನ್ನು ಪ್ರಶ್ನಿಸುತ್ತಿದ್ದ ಸುರಭಿಯನ್ನು ನೇಣುಬಿಗಿದು ಕೊಲೆ ಮಾಡಿ ನಾಟಕವಾಡುತ್ತಿದ್ದಾರೆ ಎಂದು ಸುರಭಿ ಪೋಷಕರು ಗಂಭೀರ ಆರೋಪವನ್ನು ಮಾಡಿದ್ದಾರೆ.

ಮೃತದೇಹವನ್ನು ಶ್ರವಣಬೆಳಗೊಳ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಶ್ರವಣಬೆಳಗೊಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago