ಹಾಸನ: ಹಾಸನ ಜಿಲ್ಲಾಧಿಕಾರಿ ಅಕ್ರಂ ಪಾಷ ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನ ಡಿಸಿಯಾಗಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅಧಿಕಾರ ಸ್ವೀಕರಿಸಿದ್ದಾರೆ.
ಫೆಬ್ರುವರಿ 22ರಂದು ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು. ಆ ಸ್ಥಾನಕ್ಕೆ ಪಾಷ ಅವರನ್ನು ನಿಯೋಜಿಸಲಾಗಿತ್ತು.
ಬಿಜೆಪಿ ಶಾಸಕ ಪ್ರೀತಂಗೌಡ ಚುನಾವಣಾ ಆಯೋಗಕ್ಕೆ ದೂರು ನೀಡಿ ಡಿಸಿ ಅವರನ್ನು ಬದಲಾವಣೆ ಮಾಡುವಂತೆ ಮನವಿ ಮಾಡಿದ್ದರು. ಈ ದೂರನ್ನು ಆಯೋಗ ಗಂಭೀರವಾಗಿ ಪರಿಗಣಿಸಿ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದೆ.
ನೂತನ ಜಿಲ್ಲಾಧಿಕಾರಿಯಾಗಿ ನೇಮಕವಾಗಿರುವ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಬೆಂಗಳೂರು ಪ್ರವಾಸೋದ್ಯಮ ಇಲಾಖೆಯಲ್ಲಿ ನಿರ್ದೇಶಕರಾಗಿ ಪ್ರಿಯಾಂಕಾ ಮೇರಿ ಕಾರ್ಯನಿರ್ವಹಿಸಿದ್ದರು.
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…