ಹಾಸನ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ವರ್ಗಾವಣೆ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಹಾಸನ; :ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ ಅವ​ರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿದ್ದ ಅಕ್ರಂ ಪಾಷಾ ಅವರನ್ನು ವರ್ಗಾವಣೆಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು.

ಇದೀಗ ಮತ್ತೊಮ್ಮೆ ಹಾಸನ ಜಿಲ್ಲಾಧಿಕಾರಿಯಾಗಿ ಅಕ್ರಂಪಾಷಾ ಬಂದಿದ್ದಾರೆ. ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಚುನಾವಣಾ ಮಾರ್ಗಸೂಚಿ ಪಾಲಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿತ್ತು. ರೋಹಿಣಿ ಸಿಂಧೂರಿ ಅವರವನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಬಳಿಕ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯಿಂದ ತೆರವಾಗಿದ್ದ ಜಿಲ್ಲಾಧಿಕಾರಿ ಸ್ಥಾನಕ್ಕೆ ಅಕ್ರಂ ಪಾಷಾ ಅವರನ್ನು ನೇಮಿಸಲಾಗಿತ್ತು.

ಆದೇಶದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸ್ಥಳೀಯ ಸಂಸ್ಥೆ ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಅಕ್ರಂ ಪಾಷಾ‌ ಅವರಿಗೆ ಅಧಿಕಾರ ಹಸ್ತಾಂತರ ಮಾಡುವಂತೆ ಸೂಚಿಸಲಾಗಿದೆ ಆದರೆ ಪ್ರಿಯಾಂಕಾ ಅವರಿಗೆ ಯಾವುದೇ ಜಾಗ ತೋರಿಸದೆ ವರ್ಗಾವಣೆ ಮಾಡಲಾಗಿದೆ.