ಹಾಸನ: ಚಾಲಕನ ನಿಯಂತ್ರ ತಪ್ಪಿ ಜೀಪ್ ರಸ್ತೆ ಬದಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ (26) ಚಿಕಿತ್ಸೆ ಫಲಕಾರಿಯಾಗದೆ ರವಿವಾರ (ಡಿಸೆಂಬರ್ 01) ರಾತ್ರಿ 9.30ರ ವೇಳೆಗೆ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ಜೀಪ್ ಪಲ್ಟಿಯಾಗಿತ್ತು. ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಕೊನೆಯುಸಿರು ಎಳೆದಿದ್ದಾರೆ.
ಮೂಲತಃ ಬಿಹಾರ ಮೂಲದ ಹರ್ಷಬರ್ಧನ ಮದ್ಯಪ್ರದೇಶದ ಸಿಂಗ್ರುಲಿಯಲ್ಲಿ ವಾಸವಾಗಿದ್ದರು. ಅಖಿಲೇಶ್ ಕುಮಾರ್ ಸಿಂಗ್ ಹಾಗೂ ಡೋಲಿ ಸಿಂಗ್ ದಂಪತಿಯ ಪುತ್ರ ಹರ್ಷವರ್ಧನ. ರಾಜ್ಯ ಆಡಳಿತ ಸೇವೆಯಲ್ಲಿರುವ ಸರ್ಕಾರಿ ನೌಕರನ ಮಗನಾಗಿದ್ದ ಹರ್ಷವರ್ಧನ್ ಸಿವಿಲ್ ಇಂಜಿನಿಯರಿಂಗ್ ಪದವಿಧರರಾಗಿದ್ದರು. ಸರ್ಕಾರಿ ಕೆಲಸಕ್ಕೂ ಸೇರಿಕೊಂಡಿದ್ದರು. ಆದರೆ, ಜೀವನದ ಗುರಿ ಬೇರೆಯೇ ಆಗಿತ್ತು. 2022ರಲ್ಲಿ ಮೊದಲ ಯತ್ನದಲ್ಲೇ ಯುಪಿಎಸ್ಸಿಯಲ್ಲಿ 153ನೇ ರ‍್ಯಾಂಕ್ ಪಡೆದಿದ್ದರು.
ಹರ್ಷವರ್ಧನ್ ಅವರು ಇಲಾಖಾ ತರಬೇತಿ ಮುಗಿಸಿ ನಾಲ್ಕು ವಾರ ಮೈಸೂರಿನ ಪೊಲಿಸ್ ಅಕಾಡೆಮಿಯಲ್ಲಿ ಟ್ರೈನಿಂಗ್ ಮುಗಿಸಿದ್ದರು. ನಂತರ, ಅವರು ಹಾಸನ ಜಿಲ್ಲೆಗೆ ಡಿವೈಎಸ್ಪಿಯಾಗಿ ನಿಯೋಜನೆಗೊಂಡಿದ್ದರು. ಹೀಗಾಗಿ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಪೊಲೀಸ್ ಇಲಾಖೆಯ ಜೀಪ್ ಹತ್ತಿ ಮೈಸೂರಿನಿಂದ ಹಾಸನದತ್ತ ಬರುತ್ತಿದ್ದರು.
ಹಾಸನ ತಾಲ್ಲೂಕಿನ ಹಾಸನ ಮೈಸೂರು ರಸ್ತೆಯ ರಾಷ್ಟ್ರಿಯ ಹೆದ್ದಾರಿ 373ರ ಕಿತ್ತಾನೆಗಡಿ ಬಳಿ ಅತಿಯಾದ ವೇಗದಲ್ಲಿ ಬರುತ್ತಿದ್ದ ಜೀಪ್ ಸಂಜೆ 4:15ಕ್ಕೆ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದಿದ್ದು, ನಂತರ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಅಪಘಾತದಲ್ಲಿ ಹರ್ಷವರ್ಧನ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೆ ಸ್ಥಳೀಯರು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರ ರಕ್ತಸ್ರಾವಾಗಿದ್ದರಿಂದ ಮತ್ತು ತಲೆಗೆ ಗಂಭಿರ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…