ಹಾಸನ: ಸಿನಿಮೀಯ ರೀತಿಯಲ್ಲಿ ಡಿವೈಎಸ್‌ಪಿ ಒಬ್ಬರ ಬ್ಯಾಂಕ್ ಖಾತೆಗೆ ಕನ್ನ ಹಾಕಿ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದಲೇ 15,98,761 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ. ಈ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಗೆ ಮುರಳೀಧರ್ ಅವರು ದೂರು ನೀಡಿದ್ದಾರೆ.
ಮಡಿಕೇರಿಯ ಕೆನರಾ ಬ್ಯಾಂಕ್ ಮುಖ್ಯಶಾಖೆ ಹಾಗೂ ಭಾಗಮಂಡಲದ ಕೆನರಾಬ್ಯಾಂಕ್‌ನ ಶಾಖೆಯಲ್ಲಿ ಪಿ.ಕೆ.ಮುರಳೀಧರ್ ಖಾತೆಗಳನ್ನು ಹೊಂದಿದ್ದಾರೆ.
ಮೇ 20 ರಂದು ಮಧ್ಯಾಹ್ನ 1:30ರ ವೇಳೆಗೆ ಡಿವೈಎಸ್‌ಪಿ ಅವರ ಮೊಬೈಲ್ ಸಂಖ್ಯೆಗೆ ಖಾಲಿ ಮೆಸೇಜ್‌ಗಳು ಬಂದಿವೆ. ಇದಾದ ನಂತರ ತಮ್ಮ ಗಮನಕ್ಕೇ ಬಾರದೇ ಬೇರೆ ಬೇರೆ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ. ಮಡಿಕೇರಿಯಲ್ಲಿರುವ ಕೆನರಾ ಬ್ಯಾಂಕ್ ಮುಖ್ಯಶಾಖೆ ಖಾತೆಯಿಂದ ಬೆಳಗ್ಗೆ 10.29 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಒಟ್ಟು 25 ವರ್ಗಾವಣೆಗಳ ಮೂಲಕ ಒಟ್ಟು 12,12,711 ರೂ. ಕೆನರಾಬ್ಯಾಂಕ್ ಭಾಗಮಂಡಲ ಶಾಖೆ ಖಾತೆಯಿಂದ ಬೆಳಿಗ್ಗೆ 10.28 ಗಂಟೆಯಿಂದ ಮಧ್ಯಾಹ್ನ 12.56 ಗಂಟೆವರೆಗೆ ಒಟ್ಟು 10 ವರ್ಗಾವಣೆ ಮೂಲಕ 3,88,050 ರೂ. ಎಗರಿಸಿದ್ದಾರೆ.
ಎರಡು ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು 15,98,761 ರೂ. ಹಣವನ್ನು ಸೈಬರ್ ಕಳ್ಳರು ಎಗರಿಸಿದ್ದಾರೆ. ಸದ್ಯ ಖದೀಮರನ್ನು ಪತ್ತೆ ಮಾಡಿ ತಮ್ಮ ಹಣ ವಾಪಸ್ ಕೊಡಿಸುವಂತೆ ಸೆನ್ ಪೊಲೀಸ್ ಠಾಣೆಗೆ ಡಿವೈಎಸ್‌ಪಿ ಬಿ.ಕೆ ಮುರುಳಿಧರ್ ದೂರು ನೀಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…