Featured

ಹಾಸನ : ಡಿವೈಎಸ್‌ಪಿ ಬ್ಯಾಂಕ್ ಖಾತೆಗೆ ಕನ್ನ – 15 ಲಕ್ಷಕ್ಕೂ ಅಧಿಕ ಹಣ ಎಗರಿಸಿದ ಸೈಬರ್ ಕಳ್ಳರು – vishwanews24

ಹಾಸನ : ಡಿವೈಎಸ್‌ಪಿ ಬ್ಯಾಂಕ್ ಖಾತೆಗೆ ಕನ್ನ – 15 ಲಕ್ಷಕ್ಕೂ ಅಧಿಕ ಹಣ ಎಗರಿಸಿದ ಸೈಬರ್ ಕಳ್ಳರು

ಹಾಸನ: ಸಿನಿಮೀಯ ರೀತಿಯಲ್ಲಿ ಡಿವೈಎಸ್‌ಪಿ ಒಬ್ಬರ ಬ್ಯಾಂಕ್ ಖಾತೆಗೆ ಕನ್ನ ಹಾಕಿ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದಲೇ 15,98,761 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ. ಈ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಗೆ ಮುರಳೀಧರ್ ಅವರು ದೂರು ನೀಡಿದ್ದಾರೆ.

ಮಡಿಕೇರಿಯ ಕೆನರಾ ಬ್ಯಾಂಕ್  ಮುಖ್ಯಶಾಖೆ ಹಾಗೂ ಭಾಗಮಂಡಲದ ಕೆನರಾಬ್ಯಾಂಕ್‌ನ ಶಾಖೆಯಲ್ಲಿ ಪಿ.ಕೆ.ಮುರಳೀಧರ್ ಖಾತೆಗಳನ್ನು ಹೊಂದಿದ್ದಾರೆ.

ಮೇ 20 ರಂದು ಮಧ್ಯಾಹ್ನ 1:30ರ ವೇಳೆಗೆ ಡಿವೈಎಸ್‌ಪಿ ಅವರ ಮೊಬೈಲ್ ಸಂಖ್ಯೆಗೆ ಖಾಲಿ ಮೆಸೇಜ್‌ಗಳು ಬಂದಿವೆ. ಇದಾದ ನಂತರ ತಮ್ಮ ಗಮನಕ್ಕೇ ಬಾರದೇ ಬೇರೆ ಬೇರೆ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ. ಮಡಿಕೇರಿಯಲ್ಲಿರುವ ಕೆನರಾ ಬ್ಯಾಂಕ್ ಮುಖ್ಯಶಾಖೆ ಖಾತೆಯಿಂದ ಬೆಳಗ್ಗೆ 10.29 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಒಟ್ಟು 25 ವರ್ಗಾವಣೆಗಳ ಮೂಲಕ ಒಟ್ಟು 12,12,711 ರೂ. ಕೆನರಾಬ್ಯಾಂಕ್ ಭಾಗಮಂಡಲ ಶಾಖೆ ಖಾತೆಯಿಂದ ಬೆಳಿಗ್ಗೆ 10.28 ಗಂಟೆಯಿಂದ ಮಧ್ಯಾಹ್ನ 12.56 ಗಂಟೆವರೆಗೆ ಒಟ್ಟು 10 ವರ್ಗಾವಣೆ ಮೂಲಕ 3,88,050 ರೂ. ಎಗರಿಸಿದ್ದಾರೆ.

ಎರಡು ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು 15,98,761 ರೂ. ಹಣವನ್ನು ಸೈಬರ್ ಕಳ್ಳರು ಎಗರಿಸಿದ್ದಾರೆ. ಸದ್ಯ ಖದೀಮರನ್ನು ಪತ್ತೆ ಮಾಡಿ ತಮ್ಮ ಹಣ ವಾಪಸ್ ಕೊಡಿಸುವಂತೆ ಸೆನ್ ಪೊಲೀಸ್ ಠಾಣೆಗೆ ಡಿವೈಎಸ್‌ಪಿ ಬಿ.ಕೆ ಮುರುಳಿಧರ್ ದೂರು ನೀಡಿದ್ದಾರೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

13 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago