ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಸಂಚಲನ ಹುಟ್ಟಿಸಿರುವ ಹಾಸನ ಪೆನ್‌ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ ಎಚ್‌ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.
ಎಸ್ ಐ ಟಿ ಅಧಿಕಾರಿಗಳು ಸಿಎಂ, ಡಿಸಿಎಂ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಇಂತಹ ವಿಚಾರದಲ್ಲಿ ನಿಸ್ಸೀಮರು. ದೇವೇಗೌಡರು ಹಾಗೂ ತಾಯಿ ಆರೋಗ್ಯ ಹಿನ್ನೆಲೆಯಲ್ಲಿ ನಾನು ಮನೆಗೆ ಭೇಟಿ ಕೊಟ್ಟಿದ್ದೆ. ಆದರೆ ಎಚ್ ಡಿ ಕೆ, ರೇವಣ್ಣ ಕುಟುಂಬದ ಸಂಘಟಿತ ಪಾಪ ಕೃತ್ಯ ಎಂದು ಸಿಎಂ ಆರೋಪ ಮಾಡಿದ್ದಾರೆ. ಹೀಗಾದಾಗ ಈ ಪ್ರಕರಣದಲ್ಲಿ ನ್ಯಾಯ ಸಿಗಲು ಹೇಗೆ ಸಾಧ್ಯ? ನಾನು ದೇವೇಗೌಡರ ಬಳಿ ಯಾವ ವಕೀಲರನ್ನು ಕರೆದುಕೊಂಡು ಹೋಗಿದ್ದೇನೆ? ಎಂದು ಪ್ರಶ್ನಿಸಿದರು.
‘ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪೆನ್ ಡ್ರೈವ್ ಹಾಸನ ಜಿಲ್ಲೆಗೆ ಮಾತ್ರ ಸೀಮಿತ ಆಗಿರಲಿಲ್ಲ. ಪೊಲೀಸ್ ಅಧಿಕಾರಿಗಳನ್ನು ಇಟ್ಟುಕೊಂಡು ಹಂಚಿಕೆ ಮಾಡಿದ್ದಾರೆ. ಮಂಡ್ಯ, ಬೆಂಗಳೂರು ಗ್ರಾಮಾಂತರದಲ್ಲಿ ಮಾಡಿದ್ದಾರೆ. 22 ನೇ ತಾರೀಕು ಜೆಡಿಎಸ್ ಅಭ್ಯರ್ಥಿಯ ಚುನಾವಣಾ ಏಜೆಂಟ್ ಪೂರ್ಣಚಂದ್ರ ಏಪ್ರಿಲ್ 22 ರಂದು ಹಾಸನ ಡಿಸಿಗೆ ಪೆನ್ ಡ್ರೈವ್ ವಿಚಾರವಾಗಿ ದೂರನ್ನು ನೀಡಿದ್ದರು. ಪ್ರಜ್ವಲ್ ರೇವಣ್ಣ ವಿಡಿಯೋ ನೋಡಲು ವಾಟ್ಸಪ್ ಚಾನೆಲ್ ಹಿಂಬಾಲಿಸಿ ಎಂದು ಮೆಸೇಜ್ ಹರಿದಾಡಿತ್ತು. ನಾನು ಈ ವಿಚಾರವಾಗಿ ಯಾರನ್ನು ರಕ್ಷಣೆ ಮಾಡುವುದಿಲ್ಲ. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿರಲಿ ದೇಶದ ಕಠಿಣ ಕಾನೂನು ಪ್ರಕಾರ ಶಿಕ್ಷೆ ಆಗಲಿ. ಇದರಲ್ಲಿ ಯಾವುದೇ ರಾಜಿ ಇಲ್ಲ’ ಎಂದು ಎಚ್‌ಡಿಕೆ ಹೇಳಿದ್ದಾರೆ.
ನವೀನ್ ಗೌಡ ಎಂಬ ವ್ಯಕ್ತಿ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ. ನವೀನ್ ಗೌಡ, ಕಾರ್ತಿಕ್, ಪುಟ್ಟರಾಜು ವಿರುದ್ಧ ಪೂರ್ಣಚಂದ್ರ ಎಂಬುವವರು ದೂರು ಕೊಟ್ಟಿದ್ದರು. ಆದರೆ ಅವರ ವಿರುದ್ಧ ಯಾವುದೇ ಕ್ರಮ ಆಗಿಲ್ಲ. ಬೇರೆ ಪಕ್ಷದ ಕಾರ್ಯಕರ್ತರ ವಿರುದ್ಧ ಕೇಸ್ ಕೊಟ್ಟರೆ ತುರ್ತು ಕ್ರಮ ಕೈಗೊಳ್ಳಲಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಎಫ್ ಐ ಆರ್ ದಾಖಲಾದರೂ ಯಾವುದೇ ಕ್ರಮ ಆಗಿಲ್ಲ ಏಕೆ? ಎಂದು ಪ್ರಶ್ನಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…