ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವೀಡಿಯೋ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಹಾಗೂ ದೇವರಾಜೇಗೌಡಗೆ ಎಸ್‌ಐಟಿ ತಂಡ ನೋಟಿಸ್ ನೀಡಿದೆ.
ಪ್ರಕರಣ ಸಂಬಂಧ ಏ.23 ರಂದು ಹಾಸನ ಸೈಬರ್ ಪೊಲೀಸ್ ಠಾಣೆಗೆ ಪ್ರಜ್ವಲ್ ರೇವಣ್ಣ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ದೂರು ನೀಡಿದ್ದರು. ಅದನ್ನು ಆಧರಿಸಿ ಕಾರ್ತಿಕ್ ಮತ್ತು ದೇವರಾಜೇಗೌಡಗೆ ನೋಟಿಸ್ ನೀಡಲಾಗಿದೆ.
ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್, ಪುಟ್ಟರಾಜು, ಕ್ವಾಲಿಟಿ ಬಾರ್ ಶರತ್, ನವೀನ್‌ಗೌಡ ಹಾಗೂ ಚೇತನ್‌ಗೌಡ ವಿರುದ್ಧ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಎಸ್‌ಐಟಿ ಕೈಗೆತ್ತಿಕೊಂಡಿದೆ.
ಪ್ರಕರಣ ಸಂಬಂಧ ಕಾರ್ತಿಕ್ ಹಾಗೂ ದೇವರಾಜೇಗೌಡಗೆ ನೋಟಿಸ್ ನೀಡಿದೆ. ನೋಟಿಸ್ ತಲುಪಿದ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…