Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ, ಇನ್ನು ಈ ಬಗ್ಗೆ ಪ್ರಜ್ವಲ್ ರೇವಣ್ಣ ಅವರ ಚಿಕ್ಕಪ್ಪ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ್ದು, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾನಾಗಲಿ ದೇವೇಗೌಡರಾಗಲಿ ಎಂದೂ ಸಹ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ಪರಿಹರಿಸಿ ಕಳುಹಿಸಿದ್ದೇವೆ. ನಾವಂತೂ ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಗೌರವ ನೀಡಿದ್ದೇವೆ ಎಂದು ಹೇಳಿದರು.
ಈ ಬಗ್ಗೆ ಎಸ್ಐಟಿ ತನಿಖೆಗೆ ಈಗಾಗಲೇ ಸರ್ಕಾರ ಆದೇಶ ಮಾಡಿದೆ. ಎಸ್‌ಐಟಿ ತನಿಖೆಯಿಂದ ವಾಸ್ತವಾಂಶ ಹೊರಗೆ ಬರಲಿ. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರು ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ನಾವಂತೂ ಯಾವುದಕ್ಕೂ ತಪ್ಪು ಮಾಡಿದ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ. ತನಿಖೆಯ ವರದಿ ಸಂಪೂರ್ಣ ಹೊರಗೆ ಬರಲಿ ಬಂದ ನಂತರ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…