Featured

ಹಾಸನ ಪೆನ್ ಡ್ರೈವ್ ಪ್ರಕರಣ –  ಉಪ್ಪು ತಿಂದವನು ನೀರು ಕುಡಿಯಲೇಬೇಕು  :  ಎಚ್ ಡಿ ಕುಮಾರಸ್ವಾಮಿ – Vishwanews24

ಹಾಸನ ಪೆನ್‌ಡ್ರೈವ್ ಪ್ರಕರಣ –  ಉಪ್ಪು ತಿಂದವನು ನೀರು ಕುಡಿಯಲೇಬೇಕು  :  ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ, ಇನ್ನು ಈ ಬಗ್ಗೆ ಪ್ರಜ್ವಲ್ ರೇವಣ್ಣ ಅವರ ಚಿಕ್ಕಪ್ಪ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ್ದು, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾನಾಗಲಿ ದೇವೇಗೌಡರಾಗಲಿ ಎಂದೂ ಸಹ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ಪರಿಹರಿಸಿ ಕಳುಹಿಸಿದ್ದೇವೆ. ನಾವಂತೂ ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಗೌರವ ನೀಡಿದ್ದೇವೆ ಎಂದು ಹೇಳಿದರು.

ಈ ಬಗ್ಗೆ ಎಸ್ಐಟಿ ತನಿಖೆಗೆ ಈಗಾಗಲೇ ಸರ್ಕಾರ ಆದೇಶ ಮಾಡಿದೆ. ಎಸ್‌ಐಟಿ ತನಿಖೆಯಿಂದ ವಾಸ್ತವಾಂಶ ಹೊರಗೆ ಬರಲಿ. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರು ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ನಾವಂತೂ ಯಾವುದಕ್ಕೂ ತಪ್ಪು ಮಾಡಿದ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ. ತನಿಖೆಯ ವರದಿ ಸಂಪೂರ್ಣ ಹೊರಗೆ ಬರಲಿ ಬಂದ ನಂತರ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

16 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago