Featured

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು

ಹಾಸನ: ಕೆಲವೇ ದಿನಗಳಲ್ಲಿ ಹಸೆಮಣೆ  ಏರಬೇಕಿದ್ದ ವರನೊಬ್ಬ ಪ್ರೀವೆಡ್ಡಿಂಗ್ ಶೂಟ್‌ಗೆ ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು.ಎಲ್‌.ಎನ್. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದರು.

ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು. ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಮದುವೆ ನಿಗದಿಯಾಗಿತ್ತು.

ಇದನ್ನೂ ಓದಿ: 

ಮದುವೆಗೆ ಎರಡೂ ಕುಟುಂಬಗಳಲ್ಲಿ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಈ ನಡುವೆ ಇಂದು ಬೆಳಿಗ್ಗೆ ಮನು ಅವರು ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ತಮ್ಮ ವಿಟಾರಾ ಬ್ರೆಝಾ ಕಾರಿನಲ್ಲಿ ಒಬ್ಬರೇ ಹೊರಟಿದ್ದರು.

ಕಾರು ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ತಲುಪಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮನು ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:

ಇನ್ನೇನು ಕೆಲವೇ ದಿನಗಳಲ್ಲಿ ಮಗನ ಮದುವೆ ಮಾಡಿ ಸಂಭ್ರಮಿಸಬೇಕಿದ್ದ ಪೋಷಕರು, ಮಗನ ಹಠಾತ್ ಸಾವು ಕೇಳಿ ಆಘಾತಕ್ಕೊಳಗಾಗಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ.

ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

7 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

8 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

8 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

11 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

11 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

11 hours ago