ಹಾಸನ: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ವರನೊಬ್ಬ ಪ್ರೀವೆಡ್ಡಿಂಗ್ ಶೂಟ್‌ಗೆ ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು.ಎಲ್.ಎನ್. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದರು.
ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು. ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಮದುವೆ ನಿಗದಿಯಾಗಿತ್ತು.
ಇದನ್ನೂ ಓದಿ:
ಮದುವೆಗೆ ಎರಡೂ ಕುಟುಂಬಗಳಲ್ಲಿ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಈ ನಡುವೆ ಇಂದು ಬೆಳಿಗ್ಗೆ ಮನು ಅವರು ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ತಮ್ಮ ವಿಟಾರಾ ಬ್ರೆಝಾ ಕಾರಿನಲ್ಲಿ ಒಬ್ಬರೇ ಹೊರಟಿದ್ದರು.
ಕಾರು ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ತಲುಪಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮನು ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ:
ಇನ್ನೇನು ಕೆಲವೇ ದಿನಗಳಲ್ಲಿ ಮಗನ ಮದುವೆ ಮಾಡಿ ಸಂಭ್ರಮಿಸಬೇಕಿದ್ದ ಪೋಷಕರು, ಮಗನ ಹಠಾತ್ ಸಾವು ಕೇಳಿ ಆಘಾತಕ್ಕೊಳಗಾಗಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ.
ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…