ಹಾಸನ: ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬನಿಗೆ ಮರದ ಕೊಂಬೆ ಬಡಿದು ಮೃತಪಟ್ಟ ಘಟನೆ ಬೇಲೂರಿನ ನಿಡಗೋಡು ಗ್ರಾಮದ ಬಳಿ ನಡೆದಿದೆ.
ಬೇಲೂರಿನಿಂದ – ಮಂಗಳೂರು ಕಡೆಗೆ ಕೆಎ-45 ಎಫ್-0033 ನಂಬರ್‌ನ ಸಾರಿಗೆ ಬಸ್ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ಬಂದ ಟಿಪ್ಪರ್‌ಗೆ ದಾರಿ ಬಿಡುವಾಗ ಈ ದುರ್ಘಟನೆ ಸಂಭವಿಸಿದೆ. ಮೃತನ ಗುರುತು ಪತ್ತೆಯಾಗಿಲ್ಲ. ವ್ಯಕ್ತಿಯ ಮೃತದೇಹವನ್ನು ಬೇಲೂರಿನ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಗ್ರಾಮದ ರಸ್ತೆ ಬದಿಯಲ್ಲಿಯೇ ಬೃಹತ್ ಗಾತ್ರದ ಹಲವಾರು ಮರಗಳಿವೆ. ಈ ರೀತಿಯಲ್ಲಿಯೇ ಮೂರ್ನಾಲ್ಕು ಸಾವುಗಳು ಸಂಭವಿಸಿವೆ. ಮರಗಳನ್ನು ತೆರವುಗೊಳಿಸುವಂತೆ ಮನವಿ ಮಾಡಿದ್ದರು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಮರಗಳನ್ನು ತೆರವುಗೊಳಿಸಬೇಕು ಇಲ್ಲವಾದಲ್ಲಿ ರಸ್ತೆ ಬಂದ್ ಮಾಡಿ ಮರ ತೆರವು ಮಾಡುವುದಾಗಿ ಸ್ಥಳೀಯರ ಎಚ್ಚರಿಕೆ ನೀಡಿದ್ದಾರೆ.
ಸ್ಥಳಕ್ಕೆ ಬೇಲೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…