ಹಾಸನ: ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರೆ ಮಂಗಳವಾರ ನಡೆದಿದ್ದು, ಈ ಸಂದರ್ಭದಲ್ಲಿ ವಾರ್ಷಿಕವಾಗಿ ನಡೆಯುವ ಗೌರವ ವಂದನೆ ಸ್ವೀಕಾರ ಸಂಪ್ರದಾಯವನ್ನು ಪಾಲನೆ ಮಾಡಲಾಗಿದೆ. ಸಾಮಾನ್ಯವಾಗಿ ಈ ವೇಳೆ ಕುರಾನ್ ಪಠಣ ನಡೆಸುತ್ತಿದ್ದರೂ ಈ ಬಾರಿ ಮುಸ್ಲಿಂ ಖಾಜಿಗಳು ಕೇವಲ ಶ್ಲೋಕ ಪಠಣಕ್ಕೆ ಸೀಮಿತಗೊಳಿಸಿದ್ದಾರೆ. ಈ ವೇಳೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಜೋರಾಗಿ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದ್ದಾರೆ.
ಬೆಳಗ್ಗೆ ಸುಮಾರು 10:50ಕ್ಕೆ ವಾಡಿಕೆಯಂತೆ ಖಾಜ ಸಾಹೇಬರು ದೇವಸ್ಥಾನದ ಮೂಲೆಯ ಮೆಟ್ಟಿಲ ಮೇಲೆ ಶ್ಲೋಕ ಪಠಿಸಿದ ನಂತರ ತೇರು ಎಳೆಯಲಾಯಿತು. ಈ ವೇಳೆ ಸ್ಥಳೀಯ ಶಾಸಕ ಕೆಎಸ್ ಲಿಂಗೇಶ್, ಮಾಜಿ ಸಚಿವ ಹೆಚ್‌ಡಿ ರೇವಣ್ಣ, ದೇವಸ್ಥಾನದ ಆಡಳಿತಾಧಿಕಾರಿ ವಿದ್ಯುಲ್ಲತಾ, ಸೇರಿದಂತೆ ಸಹಸ್ರಾರು ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು.
ಕುರಾನ್ ಪಠಣ ವಿವಾದದಿಂದ ಚನ್ನಕೇಶವಸ್ವಾಮಿ ರಥೋತ್ಸವಕ್ಕೆ ಹಲವು ಅಡಚಣೆಗಳು ಎದುರಾಗಿದ್ದವು. ಇದರ ನಡುವೆಯೂ ಮಂಗಳವಾರದಿಂದ ಜಾತ್ರಾ ಮಹೋತ್ಸವ ಆರಂಭವಾಗಿದೆ. ರಥೋತ್ಸವದ ವೇಳೆ ಕುರಾನ್ ಪಠಣ ಮಾಡದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜೈ ಶ್ರೀರಾಮ್ ಘೋಷಣೆ ಕೂಗಿದರು.
ಸೋಮವಾರ ಸಂಜೆ ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಕುರಾನ್ ಪಠಣ ಮಾಡುವ ಸುತ್ತಲೂ ಬ್ಯಾರಿಕೇಡ್ ಹಾಕಿ ಅರೆ ಮಿಲಿಟರಿ ಕಾರ್ಯಪಡೆ ಹಾಗೂ ಪೊಲೀಸರನ್ನು ನಿಯೋಜಿಸಲಾಗಿತ್ತು. ಪ್ರತಿ ವರ್ಷ ರಥದ ಮುಂದೆ ಕುರಾನ್ ಪಠಣ ಮಾಡಲಾಗುತ್ತಿತ್ತು. ಆದರೆ ಈ ಭಾರಿ ವಿರೋಧ ವ್ಯಕ್ತವಾದ್ದರಿಂದ ದೇವಾಲಯದ ಹೊರಭಾಗದ ಮೂಲೆಯಲ್ಲಿ ಮೆಟ್ಟಿಲ ಮೇಲೆ ಬೇಲೂರು ತಾಲೂಕಿನ ದೊಡ್ಡ ಮೇದೂರು ಗ್ರಾಮದ ಸಯ್ಯದ್ ಸಜ್ಜಾದ್ ಭಾಷಾ ಖಾದ್ರಿ ಶ್ಲೋಕ ಓದಿದರು.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …