ಹಾಸನ: ಎಸೆಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. 14 ವರ್ಷದ ಬಾಲಕಿಯ ಮೇಲೆ ಆಕೆ ಕಲಿಯುತ್ತಿದ್ದ ಖಾಸಗಿ ಶಾಲೆಯ ಸ್ಕೂಲ್ ಬಸ್ ಚಾಲಕ ರಂಜಿತ್ ಎಂಬಾತ ದೌರ್ಜನ್ಯ ಎಸಗಿದ್ದಾಗಿ ಆರೋಪಿಸಲಾಗಿದೆ.
ಆರೋಪಿಯು ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಈ ಮಧ್ಯೆ ಮೂರು ದಿನಗಳ ಹಿಂದೆ ಶಾಲೆಯಲ್ಲಿ ಕ್ರೀಡಾಕೂಟ ನಡೆಯುತ್ತಿದ್ದ ವೇಳೆ ಸಂತ್ರಸ್ತ ಬಾಲಕಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ತಕ್ಷಣವೇ ಆಕೆಯನ್ನು ಹಿಮ್ಸ್ಗೆ ದಾಖಲಿಸಲಾಗಿದ್ದು, ಅಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ಬಾಲಕಿ ಮತ್ತು ಮಗುವನ್ನು ಕೆಲ ದಿನಗಳ ಆರೈಕೆ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಒಪ್ಪಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಅತ್ಯಾಚಾರ ಎಸಗಿರುವ ಆರೋಪಿ ವಿವಾಹಿತನಾಗಿದ್ದು, ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ಪೊಕ್ಸೊ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…