Featured

ಹಾಸನ : ಮಹಾಮಾರಿ ಡೆಂಗ್ಯೂಗೆ ಎಂಬಿಬಿಎಸ್ ವಿದ್ಯಾರ್ಥಿ ಬಲಿ – vishwanews24

ಹಾಸನ : ಮಹಾಮಾರಿ ಡೆಂಗ್ಯೂಗೆ ಎಂಬಿಬಿಎಸ್ ವಿದ್ಯಾರ್ಥಿ ಬಲಿ

ಹಾಸನ: ಡೆಂಗ್ಯೂ ಮಹಾಮಾರಿ ಎಂಬಿಬಿಎಸ್ ವಿದ್ಯಾರ್ಥಿಯನ್ನು ಬಲಿಪಡೆದಿದೆ. ಮೃತನನ್ನು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿ, ಹೊಳೆನರಸೀಪುರ ತಾಲ್ಲೂಕಿನ, ಹಳ್ಳಿಮೈಸೂರು ಹೋಬಳಿ, ಗೋಹಳ್ಳಿ ಗ್ರಾಮದ ರೇಖಾ ಮತ್ತು ಮಂಜುನಾಥ್ ದಂಪತಿಯ ಪುತ್ರ ಕುಶಾಲ್ (22) ಎಂದು ಗುರುತಿಸಲಾಗಿದೆ.

ಕಳೆದ ಒಂದು ವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಶಾಲ್ ಗುರುವಾರ ಸಂಜೆ ಸಾವನ್ನಪ್ಪಿದ್ದಾನೆ.

ಡೆಂಗ್ಯೂ ಸೋಂಕಿತನಾಗಿ ಜ್ವರದಿಂದ ಬಳಲುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ ಇವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಗುಣವಾಗದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರತಿಭಾನ್ವಿತ, ಬಡ ವಿದ್ಯಾರ್ಥಿಯಾಗಿದ್ದ ಕುಶಾಲ್ ಹಾಸನದ ಹಿಮ್ಸ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದರು.

ಕುಶಾಲ್ ತಾಯಿ, ಟೈಲರ್ ವೃತ್ತಿಯಲ್ಲಿದ್ದು, ಅವರೂ ಕೂಡ ಡೆಂಗ್ಯೂ ಸೋಂಕಿನಿಂದ ಬಳಲುತ್ತಿದ್ದಾರೆ. ಆವರೂ ಕೂಡ ಆಸ್ಪತ್ರೆಯಲ್ಲೇ ಒಳರೋಗಿಯಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

4 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

5 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

5 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

5 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

5 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

5 hours ago