ಹಾಸನ: ಕೊರಿಯರ್ ಅಂಗಡಿಯಲ್ಲಿ ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.
ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾತನಾಡಿ, ಪ್ರಕರಣದ ಪ್ರಮುಖ ಆರೋಪಿ ಅನೂಪ್ ಕುಮಾರ್ ನನ್ನು ಬಂಧಿಸಲಾಗಿದೆ. ನೆಲಮಂಗಲ ಬಳಿ ಆರೋಪಿಯನ್ನು ಬಂಧಿಸಿದ್ದೇವೆ. ಇದೀಗ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಏಳು ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆಯಲಾಗಿದೆ ಎಂದರು.
ಮಿಕ್ಸಿಯಲ್ಲಿ ಡೆಟೊನೆಟರ್ ಇಟ್ಟು ಬ್ಲಾಸ್ಟ್ ಮಾಡುವುದು ಹೇಗೆ ಎಂದು ಇಂಟರ್‍ನೆಟ್ ಸರ್ಚ್ ಮಾಡಿದ್ದಾನೆ. ರಾಮನಗರ ದಲ್ಲಿ ನಡೆಯುತ್ತಿರುವ ಕ್ವಾರಿಯಲ್ಲಿ ಎರಡು ಡೆಟೊನೆಟರ್ ತಂದಿದ್ದಾನೆ. ಡೆಟೊನೆಟರ್ ಕದ್ದಿದ್ದಾನೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
ಡಿ.16 ರಂದು ಪಾರ್ಸೆಲ್ ಕಳುಹಿಸಿದ್ದು, ಡಿ.26 ರಂದು ಮಿಕ್ಸಿ ಬ್ಲಾಸ್ಟ್ ಆಗಿತ್ತು. ಮಿಕ್ಸಿ ಬ್ಲಾಸ್ಟ್ ಆಗಿರುವ ನ್ಯೂಸ್ ಬಂದಿದೆಯಾ ಎಂದು ಡಿ.17 ರಿಂದಲೇ ಗೂಗಲ್‍ನಲ್ಲಿ ಸರ್ಚ್ ಮಾಡಿದ್ದಾನೆ. ಕೊರಿಯರ್ ಟ್ರ್ಯಾಕಿಂಗ್ ಐಡಿ ಡೆಲಿವರಿ ಆಗಿದೆಯಾ, ಬಾಂಬ್ ತಯಾರಿಕೆ ಬಗ್ಗೆಯೂ ಸರ್ಚ್ ಮಾಡಿದ್ದಾನೆ. ಡೆಟೊನೆಟರ್ ಬ್ಲಾಸ್ಟ್ ಮಾಡುವ ವೈರ್‍ನ್ನು ಅವರ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ತಲಘಟ್ಟಪುರದಲ್ಲಿರುವ ಆತನ ಮನೆಯಲ್ಲಿ ಮಿಕ್ಸಿಯ ಮೂರನೇ ಜಾರ್ ಸಿಕ್ಕಿದೆ. ನನ್ನ ಪ್ರೀತಿ ನಿರಾಕರಿಸಿದ್ದಕ್ಕೆ, ಅವಮಾನ ಮಾಡಿದ್ದಕ್ಕೆ ವಸಂತಾಳನ್ನು ಕೊಲ್ಲಲು ನಿರ್ಧರಿಸಿದ್ದೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ತನಿಖೆ ವೇಳೆ ಅನೂಪ್ ಕುಮಾರ್ ಬ್ಲಾಸ್ಟ್ ಸ್ಕೆಚ್ ಕಹಾನಿ ಬಯಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…