Featured

ಹಾಸನ: ಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು – vishwanews24

ಹಾಸನ: ಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು

ಹಾಸನ: ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಕೂಡಿಗೆ ಸಮೀಪದ ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಬೆಂಗಳೂರು ಮೂಲದ ವರ್ಷ (23) ಮೃತರು ಎಂದು ತಿಳಿದು ಬಂದಿದೆ.

ಮಾಹಿತಿ ಪ್ರಕಾರ, ಸೆ.11ರಂದು ಯುವತಿ ಇಬ್ಬರು ಸ್ನೇಹಿತರೊಂದಿಗೆ ಲಾಡ್ಜ್‌ಗೆ ಬಂದಿದ್ದರು ಎನ್ನಲಾಗಿದೆ. ಬಳಿಕ ಲಾಡ್ಜ್‌ನಲ್ಲೇ ಯುವತಿ ಮೃತಪಟ್ಟಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಸಾವಿಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

ಘಟನೆಗೆ ಸಂಬಂಧಿಸಿದಂತೆ ಲಾಡ್ಜ್‌ಗೆ ಭೇಟಿ ನೀಡಿರುವ ಡಿವೈಎಸ್ಪಿ ಮಾಲತೀಶ್ ಹಾಗೂ ಗ್ರಾಮಾಂತರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಲಾಡ್ಜ್‌ನಲ್ಲಿ ನಡೆದಿರುವ ಘಟನೆ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

ಯುವತಿಯೊಂದಿಗೆ ಬಂದಿದ್ದರು ಎನ್ನಲಾಗಿರುವ ಇಬ್ಬರು ಸದ್ಯ ಎಲ್ಲಿದ್ದಾರೆ ಎಂಬ ಬಗ್ಗೆಯೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಯುವತಿಯ ಮೃತದೇಹವನ್ನು ಸಕಲೇಶಪುರದ ಕ್ರಾಫರ್ಡ್ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೂ ‘ವಂದೇ ಮಾತರಂ’ ಪೂರ್ತಿಯಾಗಿ ಹಾಡಲು ಬರುವುದಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ – vishwanews24

ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೂ ‘ವಂದೇ ಮಾತರಂ’ ಪೂರ್ತಿಯಾಗಿ ಹಾಡಲು ಬರುವುದಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ…

6 minutes ago

ತುಳು ಭಾಷೆಗೆ ಈ ಬಾರಿ ಮಾನ್ಯತೆ ಸಿಗುವುದು ಖಂಡಿತ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24

ತುಳುವಿಗೆ ಶಾಸ್ತ್ರೀಯ ಸ್ಥಾನಮಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉಡುಪಿ : ಮಂಗಳೂರಿನಲ್ಲಿ…

21 minutes ago

ಕಾರ್ಕಳ : ಕಂಬಳ ಓಟಕ್ಕೆ ಆಯ್ಕೆಗೊಂಡವರ ತರಬೇತಿ ಶಿಬಿರಕ್ಕೆ ಚಾಲನೆ – vishwanews24

ಕಾರ್ಕಳ : ಕಂಬಳ ಓಟಕ್ಕೆ ಆಯ್ಕೆಗೊಂಡವರ ತರಬೇತಿ ಶಿಬಿರಕ್ಕೆ ಚಾಲನೆ ಕಾರ್ಕಳ : ಕಾರ್ಕಳ ಮಿಯ್ಯಾರು ಲವ ಕುಶ ಜೋಡುಕೆರೆ…

29 minutes ago

ಮಂಗಳೂರು : ಬಿಜೆಪಿಗೆ ಚುನಾವಣೆಯೇ ಅಜೆಂಡಾ ಆಗಿದ್ದರೆ, ಕಾಂಗ್ರೆಸ್‌ಗೆ ಅಭಿವೃದ್ದಿಯೇ ಅಜೆಂಡಾ : ರಮಾನಾಥ ರೈ – vishwanews24

ಮಂಗಳೂರು : ಬಿಜೆಪಿಗೆ ಚುನಾವಣೆಯೇ ಅಜೆಂಡಾ ಆಗಿದ್ದರೆ, ಕಾಂಗ್ರೆಸ್‌ಗೆ ಅಭಿವೃದ್ದಿಯೇ ಅಜೆಂಡಾ : ರಮಾನಾಥ ರೈ ಮಂಗಳೂರು : ಬಿಜೆಪಿಗೆ…

45 minutes ago

ಮಂಗಳೂರು : ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ ; ಅಂಗಾಂಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ – vishwanews24

ಮಂಗಳೂರು : ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ ; ಅಂಗಾಂಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ ಮಂಗಳೂರು : ಗಣೇಶ ಚತುರ್ಥಿದಂದು…

52 minutes ago

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ  : ಕರಾವಳಿ ಅಭಿವೃದ್ಧಿಗೆ  ಹೊಸ ಬಲ ನೀಡಲಿದೆ : ಪ್ರಸಾದ್ ರಾಜ್ ಕಾಂಚನ್ – vishwanews24

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ  : ಕರಾವಳಿ ಅಭಿವೃದ್ಧಿಗೆ  ಹೊಸ ಬಲ ನೀಡಲಿದೆ : ಪ್ರಸಾದ್ ರಾಜ್ ಕಾಂಚನ್ ಉಡುಪಿ:…

2 hours ago