ಆನೇಕಲ್: ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಕಾಲೇಜು ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬೆಂಗಳೂರು ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿನಿ ಹರ್ಷಿತ (18) ಮೃತ ದುರ್ದೈವಿ.
ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಹೀಲಲಿಗೆಯಲ್ಲಿ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಹರ್ಷಿತ ಕಾಲೇಜು ಹಾಸ್ಟೆಲ್‌ನಲ್ಲಿ ಇದ್ದಳು. ನಿನ್ನೆ ಗುರುವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಪತ್ತೆಯಾಗಿದ್ದಾಳೆ.
ಕಾಲೇಜಿನವರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆಡಳಿತ ಮಂಡಳಿ ಸಾಕಷ್ಟು ದಿನಗಳಿಂದ ಕಿರುಕುಳ ನೀಡುತ್ತಿದ್ದರೆಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ವಿದ್ಯಾರ್ಥಿನಿ ಸಾವು ಖಂಡಿಸಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…