ಪುತ್ತೂರು: ಹಿಂದು ಜಾಗರಣ ವೇದಿಕೆಯ ಕಾರ್ಯದರ್ಶಿಯಾಗಿದ್ದ ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಆರ್ಯಾಪು ನಿವಾಸಿ ಚರಣ್ ರೈ ಅವರನ್ನು ದುಷ್ಕರ್ಮಿಗಳು ಪೆರ್ಲಂಪಾಡಿ ರಸ್ತೆ ಬದಿಯಲ್ಲಿ ಕೊಲೆ ಮಾಡಿದ್ದಾರೆ.
ಚರಣ್ ರೈ ಅವರಿಗೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಸಂಪ್ಯದಲ್ಲಿ ಗಣೇಶೋತ್ಸವದ ವೇಳೆ ಯಕ್ಷಗಾನ ವೀಕ್ಷಿಸುತ್ತಿದ್ದಾಗ ಕಾರ್ತಿಕ್ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು.
ಈ ಕೊಲೆ ಪ್ರಕರಣದಲ್ಲಿ ಸಂಪ್ಯದ ಚರಣ್ ರೈ, ಕಿರಣ್ ರೈ, ಮಂಗಳೂರಿನ ಪ್ರೀತಂ ಶೆಟ್ಟಿ ಮತ್ತು ಅವರಿಗೆ ಆಶ್ರಯ ನೀಡಿದ್ದ ಮಂಗಳೂರಿನ ಮೊಂತೆರೋ ಅರೆಸ್ಟ್ ಆಗಿದ್ದರು.
ನ್ಯಾಯಾಲಯದ ವಿಚಾರಣೆಯಲ್ಲಿ ಚರಣ್ ರೈ, ಕಿರಣ್ ರೈ, ಮೊಂತೆರೋ ಜಾಮೀನು ಪಡೆದು ಹೊರ ಬಂದಿದ್ದರು. ಚರಣ್ ರೈ ಅವರು ಪೆರ್ಲಂಪಾಡಿಯಲ್ಲಿ ನೂತನ ಮೆಡಿಕಲ್ ಶಾಪ್ ಆರಂಭಿಸುವ ಕುರಿತು ಪೆರ್ಲಂಪಾಡಿಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಅವರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…