Featured

ಹಿಂದಿನಿಂದಲೂ ನಮ್ಮ ಜೊತೆಗಿದ್ದ ಅಲ್ಪಸಂಖ್ಯಾತರು ಈ ಸಲ ನಮ್ಮ ಕೈ ಹಿಡಿಯಲಿಲ್ಲ :ನಿಖಿಲ್‌ ಕುಮಾರಸ್ವಾಮಿ – vishwanews24

ಹಿಂದಿನಿಂದಲೂ ನಮ್ಮ ಜೊತೆಗಿದ್ದ ಅಲ್ಪಸಂಖ್ಯಾತರು ಈ ಸಲ ನಮ್ಮ ಕೈ ಹಿಡಿಯಲಿಲ್ಲ :ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದೆ. ಅಲ್ಲದೆ, ತೀವ್ರ ಜಿದ್ದಾಜಿದ್ದಿನ ಕಣವಾಗಿದ್ದ ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿಯವರನ್ನು ಕಾಂಗ್ರೆಸ್‌ನ ಸಿ.ಪಿ.ಯೋಗೇಶ್ವರ್‌ ಸೋಲಿಸಿದ್ದಾರೆ.

ಈ ಸೋಲಿನ ಬಳಿಕ ಬಿಡದಿ ತೋಟದ ಮನೆಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ, ’ಹಿಂದಿನಿಂದಲೂ ನಮ್ಮ ಜೊತೆಗಿದ್ದ ಅಲ್ಪಸಂಖ್ಯಾತರು ಈ ಸಲ ನಮ್ಮ ಕೈ ಹಿಡಿಯಲಿಲ್ಲ’ ಎಂದು ಹೇಳುವ ಮೂಲಕ ತಮ್ಮ ಸೋಲಿಗೆ ಮತ್ತೆ ಮಸ್ಲಿಮರನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ.

‘ಬಹುಶಃ ಒಂದು ಸಮುದಾಯದ (ಮುಸ್ಲಿಮ್‌) ಮತಗಳು ಕಾಂಗ್ರೆಸ್ ಪರ ದೊಡ್ಡಮಟ್ಟದಲ್ಲಿ ಕ್ರೋಢಿಕರಣಗೊಂಡಿದೆ. ನಮ್ಮ ಪಕ್ಷ ಅವರ ಪರವಾಗಿ ನಿಂತರೂ, ಎಷ್ಟೇ ಕೊಡುಗೆಗಳನ್ನು ನೀಡಿದರೂ ಅವರು ನಮ್ಮ ಕೈ ಹಿಡಿದಿಲ್ಲ. ಈ ಸಲ ಅವರು ನಮ್ಮೊಂದಿಗೆ ನಿಲ್ಲದಿರುವುದು ಸಹ ಫಲಿತಾಂಶದ ಏರುಪೇರಿಗೆ ಕಾರಣವಿರಬಹುದುʼ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

‘ನಾನು ಈ ರಾಮನಗರ ಜಿಲ್ಲೆಯ ಮಗ ಅಂತ ಭಾವಿಸುತ್ತೇನೆ. ಜನರ ಪ್ರೀತಿ ವಾತ್ಸಲ್ಯ ಸಿಕ್ಕಿದೆ. ಚನ್ನಪಟ್ಟಣದ ಫಲಿತಾಂತ ಆಘಾತ ತಂದಿದೆ. ಇದು ಬಯಸದೇ ಬಂದ ಚುನಾವಣೆ ನಿಮ್ಮ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಎಲ್ಲರಿಗೂ ಧ್ವನಿಯಾಗಿ ಇರುತ್ತೇನೆ. ಪಕ್ಷದಿಂದ ನಿಖಿಲ್ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿಯಿಂದ ಪಕ್ಷ ಅಲ್ಲ ಈ ಸೋಲಿನಿಂದ ನಾನು ಎದೆಗುಂದಲ್ಲʼ ಎಂದು ಹೇಳಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

9 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

10 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

11 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

11 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

11 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

11 hours ago