ಮಂಗಳೂರು: :ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಬುಧವಾರ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅ,26 ರ ಶುಕ್ರವಾರ ಮಾತನಾಡಿದ ಅವರು, ಹಿಂದಿನ ಸಿದ್ದರಾಮಯ್ಯ ಸರ್ಕಾರವೂ ಕರಾವಳಿಗೆ, ಮಂಗಳೂರಿಗೆ ಸಾಕಷ್ಟು ಅನುದಾನ ನೀಡಿದೆ. ಕಳೆದ ಐದು ವರ್ಷದಲ್ಲಿ ಮಹಾನಗರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಈ ಬಾರಿ ಪಕ್ಷ ಒಗ್ಗಟ್ಟಿನಿಂದ ಆತ್ಮವಿಶ್ವಾಸದಿಂದ ಚುನಾವಣೆ ಎದುರಿಸುತ್ತಿದ್ದು ಕಳೆದ ಸಾಲಿಗಿಂತ ಹೆಚ್ಚು ಸ್ಥಾನವನ್ನು ಗೆಲ್ಲಲಿದೆ ಎಂದು ದಿನೇಶ್ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ ಅವರು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಸರಕಾರ ಇನ್ನು ಟೇಕಾಫ್ ಆಗಿಲ್ಲ ಬೇಕಾಗಿಲ್ಲ ಸಚಿವ ಸಂಪುಟದಲ್ಲಿ ಒಗ್ಗಟ್ಟಿನಿಂದ ಕೆಲಸವಾಗುತ್ತಿಲ್ಲ. ಉಸ್ತುವಾರಿ ಸಚಿವರು,ಸಚಿವ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿಲ್ಲ. ಒಟ್ಟಾರೆಯಾಗಿ ರಾಜ್ಯ ಸರ್ಕಾರ ಕೋಮಾ ಸ್ಥಿತಿಯಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…