Featured

ಹಿಂದಿ ರಾಷ್ಟ್ರ ಭಾಷೆಯೂ ಅಲ್ಲ, ಸಾರ್ವಭೌಮ ಭಾಷೆಯೂ ಅಲ್ಲ. ಅದನ್ನು ಬಲವಂತವಾಗಿ ಜನತೆಯ ಮೇಲೆ ಹೇರಬಾರದು : ಸಿದ್ದರಾಮಯ್ಯ -Vishwanews24

ಮೈಸೂರು : ಜನತೆಯ ಮೇಲೆ ಬಲವಂತವಾಗಿ ಹಿಂದಿಯನ್ನು ಹೇರಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿ ರಾಷ್ಟ್ರ ಭಾಷೆಯೂ ಅಲ್ಲ, ಸಾರ್ವಭೌಮ ಭಾಷೆಯೂ ಅಲ್ಲ. ಅದನ್ನು ಬಲವಂತವಾಗಿ ಜನತೆಯ ಮೇಲೆ ಹೇರಬಾರದು ಎಂದು ಹೇಳಿದ್ದಾರೆ.

ಇನ್ನು ನೆರೆ ಸಂತ್ರಸ್ತರಿಗೆ 4-5 ದಿನದಲ್ಲಿ ಸಿಹಿಸುದ್ದಿ ಸಿಗಲಿದೆ. ಕೇಂದ್ರ ಸರ್ಕಾರ ಪರಿಹಾರ ನೀಡಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದು, ಇದರಲ್ಲಿ ಸಿಹಿ ಏನಿದೆ. ಘಟನೆ ನಡೆದು 45 ದಿನಗಳಿಂದ ಪರಿಹಾರ ನೀಡಿರಲಿಲ್ಲವಲ್ಲ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದರು.

ಹಿಂದಿ ಸೇರಿ ಯಾವುದೇ ಭಾಷೆ ಕಲಿಯುವುದರಲ್ಲಿ ತಪ್ಪಿಲ್ಲ, ನಮ್ಮ ವಿರೋಧವೂ ಇಲ್ಲ. ಆದರೆ, ಬಲವಂತವಾಗಿ ಹೇರಿಕೆ ಮಾಡುವುದು ಸರಿಯಲ್ಲ ಎಂದು ಹಿಂದಿ ಭಾಷೆ ಪರವಾಗಿ ಮಾತನಾಡಿದ್ದ ಬಿಜೆಪಿ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಅಲ್ಲದೆ, ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಮಕ್ಕಳಿಗೆ ಹಿಂದಿ ಕಲಿಸಿ ಎಂದು ಶಿಕಷ್ಕರಿಗೆ ಹೇಳಿದ್ದಾರೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ, ಮಕ್ಕಳಿಗೂ ಸಹ ಬಲವಂತವಾಗಿ ಹಿಂದಿ ಹೇರಿಕೆ ಮಾಡುವುದು ತಪ್ಪು. ಇಷ್ಟವಿದ್ದವರು ಕಲಿಯಬಹುದು ಎಂದು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago