ಮೈಸೂರು : ಜನತೆಯ ಮೇಲೆ ಬಲವಂತವಾಗಿ ಹಿಂದಿಯನ್ನು ಹೇರಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿ ರಾಷ್ಟ್ರ ಭಾಷೆಯೂ ಅಲ್ಲ, ಸಾರ್ವಭೌಮ ಭಾಷೆಯೂ ಅಲ್ಲ. ಅದನ್ನು ಬಲವಂತವಾಗಿ ಜನತೆಯ ಮೇಲೆ ಹೇರಬಾರದು ಎಂದು ಹೇಳಿದ್ದಾರೆ.
ಇನ್ನು ನೆರೆ ಸಂತ್ರಸ್ತರಿಗೆ 4-5 ದಿನದಲ್ಲಿ ಸಿಹಿಸುದ್ದಿ ಸಿಗಲಿದೆ. ಕೇಂದ್ರ ಸರ್ಕಾರ ಪರಿಹಾರ ನೀಡಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದು, ಇದರಲ್ಲಿ ಸಿಹಿ ಏನಿದೆ. ಘಟನೆ ನಡೆದು 45 ದಿನಗಳಿಂದ ಪರಿಹಾರ ನೀಡಿರಲಿಲ್ಲವಲ್ಲ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದರು.
ಹಿಂದಿ ಸೇರಿ ಯಾವುದೇ ಭಾಷೆ ಕಲಿಯುವುದರಲ್ಲಿ ತಪ್ಪಿಲ್ಲ, ನಮ್ಮ ವಿರೋಧವೂ ಇಲ್ಲ. ಆದರೆ, ಬಲವಂತವಾಗಿ ಹೇರಿಕೆ ಮಾಡುವುದು ಸರಿಯಲ್ಲ ಎಂದು ಹಿಂದಿ ಭಾಷೆ ಪರವಾಗಿ ಮಾತನಾಡಿದ್ದ ಬಿಜೆಪಿ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಅಲ್ಲದೆ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಕ್ಕಳಿಗೆ ಹಿಂದಿ ಕಲಿಸಿ ಎಂದು ಶಿಕಷ್ಕರಿಗೆ ಹೇಳಿದ್ದಾರೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ, ಮಕ್ಕಳಿಗೂ ಸಹ ಬಲವಂತವಾಗಿ ಹಿಂದಿ ಹೇರಿಕೆ ಮಾಡುವುದು ತಪ್ಪು. ಇಷ್ಟವಿದ್ದವರು ಕಲಿಯಬಹುದು ಎಂದು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…