ತುಮಕೂರು: ನಮ್ಮ ದೇಶದಲ್ಲಿ ಹಿಂದುಗಳು ಗಣೇಶೋತ್ಸವ ಆಚರಿಸಲು ಅನುಮತಿಗಾಗಿ ನಾಯಿಗಳಂತೆ ಅಲೆದಾಡಬೇಕಿದೆ ಎಂದು ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಗುರುವಾರ ಹೇಳಿದ್ದಾರೆ.
ನಗರದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇನ್ಮುಂದೆ ಇದೆಲ್ಲಾ ಮುಂದುವರಿಯಬಾರದು. ಎಲ್ಲಾ ಇಲಾಖೆಯ ಅನುಮತಿ ಒಂದೇ ಕಡೆ ಸಿಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಹಬ್ಬಕ್ಕೆ ಬೇಕಾಗುವ ಎಲ್ಲಾ ಪರವಾನಗಿಗಳು ಒಂದೇ ಕಡೆ ಸಿಗುವಂತೆ ಮಾಡಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ದ ಮುಖ್ಯಮಂತ್ರಿಗಳಿಗೆ ಹೇಳಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಅಧಿಕಾರಿಗಳಿಗೆ ತುಮಕೂರು ನಗರ ಶಾಸಕ ಜ್ಯೋತಿಗಣೇಶ್ ಖಡಕ್ ವಾರ್ನಿಂಗ್ ಕೊಟ್ಟರು.
ಅನುಮತಿ ನೆಪದಲ್ಲಿ ಯಾವುದೇ ಗಣೇಶೋತ್ಸವ ಸಮಿತಿಯವರನ್ನು ಅಲೆದಾಡಿಸಿದರೆ ಶಿಸ್ತು ಕ್ರಮಕ್ಕೆ ಸರಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಶಾಸಕ ಜ್ಯೋತಿ ಗಣೇಶ್ ಇದೇ ವೇಳೆ ಎಚ್ಚರಿಕೆ ನೀಡಿದರು.
ಈಗ ಇರೋದು ಬೇರೆ ಯಾವುದೋ ಸರ್ಕಾರ ಇಲ್ಲ, ಬಿಜೆಪಿ ಸರ್ಕಾರ ಇರೋದು. ಅಧಿಕಾರಿಗಳು ಇದನ್ನು ಕುರಿತು ಕೆಲಸ ಮಾಡಬೇಕು ಎಂದು ಶಾಸಕ ಜ್ಯೋತಿಗಣೇಶ್ ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…