ಹಿಂದುಗಳ ಬಗ್ಗೆ ಅಸಂಬದ್ಧ ಮಾತನಾಡಿ ಕಾಂಗ್ರೆಸ್ ಶವಪೆಟ್ಟಿಗೆಗೆ ಅಂತಿಮ ಮೊಳೆ ಹೊಡೆಯುತ್ತಿದೆ: ಶ್ರೀಶ ನಾಯಕ್ vishwanews24
ಉಡುಪಿ: ಉಡುಪಿಯ ಸರ್ಕಾರಿ ಬಾಲಕಿಯರ ಕಾಲೇಜಿನ 6 ಮಂದಿ ಮುಸ್ಲೀಂ ವಿದ್ಯಾರ್ಥಿನಿಯರ ಮೂಲಕ ಹುಟ್ಟು ಹಾಕಲಾದ ಹಿಜಾಬ್ ವಿವಾದವನ್ನು ಈಗ ಸಂಘ ಪರಿವಾರ ಮತ್ತು ಎಬಿವಿಪಿ ತಲೆಗೆ ಕಟ್ಟುತ್ತಿರುವ ಕ್ಯಾಂಪಸ್ ಫ್ರಂಟ್ ಮತ್ತು ಇತರ ಮುಸ್ಲೀಂ ಸಂಘಟನೆಗಳ ಆರೋಪ ಖಂಡನೀಯ. ಈ ವಿವಾದ ವಿಷಯದಲ್ಲಿ ಹಿಂದುಗಳು ಸಂಘಟಿತರಾಗಿದ್ದು ಮುಂದಿನ ದಿನಗಳಲ್ಲಿ ಈ ವಿವಾದವು ಹಿಜಾಬ್ ನ್ನು ಬೆಂಬಲಿಸುತ್ತಿರುವ ಸಂಘಟನೆಗಳಿಗೆ ದುಬಾರಿಯಾಗಲಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ಎಚ್ಚರಿಕೆ ನೀಡಿದ್ದಾರೆ.
ತಮ್ಮ ಹಾಸ್ಯಾಸ್ಪದ ನಡವಳಿಕೆ, ಹೇಳಿಕೆಗಳಿಂದ ಹೇಗಾದರೂ ಮಾಡಿ ಕಾಂಗ್ರೆಸ್ ಪಕ್ಷವನ್ನು ಸರ್ವನಾಶ ಮಾಡಲು ಹೊರಟಿರುವ ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಅವರು ಹಿಜಾಬ್ ವಿಷಯದಲ್ಲಿ ಹಿಂದುಗಳ ವಿರುದ್ಧ ಮತ್ತೊಮ್ಮೆ ಅಸಂಬದ್ಧವಾಗಿ ಮಾತನಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಶವಪೆಟ್ಟಿಗೆಗೆ ಅಂತಿಮ ಮೊಳೆ ಹೊಡೆಯುತಿದ್ದಾರೆ ಎಂದವರು ಟೀಕಿಸಿದ್ದಾರೆ.
ಉಡುಪಿ ಬಾಲಕಿಯರ ಸರ್ಕಾರಿ ಕಾಲೇಜಿನ 6 ಮಂದಿ ಮುಸ್ಲೀಂ ವಿದ್ಯಾರ್ಥಿನಿಯರ ಹಠ ಮತ್ತು ಮಾತುಗಳನ್ನು ಗಮನಿಸಿದರೇ, ಈ ವಿವಾದ ಅವರ ಸ್ವಯಂಯಿಚ್ಛೆಯಿಂದ ನಡೆಯುತ್ತಿರುವುಲ್ಲ, ಅದರ ಹಿಂದೆ ಸಾಕಷ್ಟು ತಯಾರಿ ತರಬೇತಿ ನಡೆದಿರುವುದು ಸಾರ್ವಜನಿಕರಿಗೆ ಮನವರಿಕೆಯಾಗಿದೆ. ಈ ವಿದ್ಯಾರ್ಥಿಗಳು ಈಗ ಉಡುಪಿ ಶಾಸಕರಾದ ರಘಪತಿ ಭಟ್ ಅವರನ್ನು ದೂಷಿಸುತ್ತಿರುವುದು ಕೂಡ ಅವರಿಗೆ ನೀಡವಾಗಿರುವ ತರಬೇತಿಯ ಭಾಗವಾಗಿದೆ. ಈ ಷಡ್ಯಂತ್ರವನ್ನು ಪೊಲೀಸರು ಬಯಲಿಗೆಳೆಯಬೇಕು ಮತ್ತು ರಾಜ್ಯದಲ್ಲಿ ಸಮಾನ ಶಿಕ್ಷಣ ಮತ್ತು ಶಿಕ್ಷಣದಲ್ಲಿ ಸಮಾನ ಸಮವಸ್ತ್ರಸಂಹಿತೆ ಜಾರಿಗೊಳಿಸಬೇಕು ಎಂದು ಶ್ರೀಶ ನಾಯಕ್ ಆಗ್ರಹಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…