Featured

ಹಿಂದುಗಳ ಭಾವನೆಗೆ ಧಕ್ಕೆ : ಹೋರಾಟಗಾರ್ತಿ ರೆಹಾನಾ ಬಂಧನ ; ಬಿಎಸ್​ಎನ್​ಎಲ್​ ಹುದ್ದೆಯಿಂದ ಅಮಾನತು ​

ಕೊಚ್ಚಿ: ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಬಿಎಸ್‌ಎನ್‌ಎಲ್‌ ಉದ್ಯೋಗಿ ಹಾಗೂ ಶಬರಿಮಲೆ ಪ್ರವೇಶಿಸಲು ಯತ್ನಿಸಿ ಸುದ್ದಿಯಾಗಿದ್ದ ಹೋರಾಟಗಾರ್ತಿ ರೆಹಾನಾ ಫಾತಿಮಾ ಅವರನ್ನು ಪಟ್ಟನಂತಿಟ್ಟ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಶಬರಿಮಲೆಗೆ ಎಲ್ಲ ವಯಸ್ಸಿನ ಮಹಿಳೆಯರೂ ಪ್ರವೇಶ ಮಾಡಬಹುದು ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದ ಬಳಿಕ ಸೆ.30 ರಂದು ರೆಹಾನಾ ಫಾತಿಮಾ ಅಯ್ಯಪ್ಪ ಸ್ವಾಮಿ ಭಕ್ತರಂತೆ ಉಡುಪು ಧರಿಸಿದ ಫೋಟೋವನ್ನು ಫೇಸ್​ಬುಕ್​ನಲ್ಲಿ ಹಾಕಿದ್ದರು. ಅದಕ್ಕೆ ತತ್ವಮಸಿ ಎಂದು ಕ್ಯಾಪ್ಷನ್​ ಬರೆದುಕೊಂಡಿದ್ದರು.

ಇತ್ತೀಚಿಗೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಿಸಲು ಯತ್ನಿಸಿದ್ದ ರೆಹಾನಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್‌ ವಜಾಗೊಳಿಸಿತ್ತು. ಈ ಹಿನ್ನಲೆಯಲ್ಲಿ ಇಂದು ಆರೋಪಿಯನ್ನು ಕೊಚ್ಚಿಯಲ್ಲಿ ವಶಕ್ಕೆ ಪಡೆದ ಪೊಲೀಸರು, ವಿಚಾರಣೆಗಾಗಿ  ಪತ್ತನಂತಿಟ್ಟ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ರೆಹಾನಾ ಫಾತಿಮಾ ಅವರ ಕೆಲವೊಂದು ಫೇಸ್‌ ಬುಕ್‌ ಪೋಸ್ಟ್‌ಗಳು ಧಾರ್ಮಿಕ ಮನೋಭಾವನೆಯನ್ನು ನೋಯಿಸುವಂತಿದೆ ಎಂದು ಆರೋಪಿಸಿ ರಾಧಾಕೃಷ್ಣ ಮೆನನ್‌ ಎಂಬವರು ಪತ್ತನಂತಿಟ್ಟ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಫಾತಿಮಾ ವಿರುದ್ಧ ಐಪಿಸಿ ಸೆಕ್ಷನ್ 295ಎ ಪ್ರಕಾರ ಕೇಸು ದಾಖಲಿಸಿಕೊಂಡಿದ್ದರು.
ಫಾತಿಮಾ ಕೊಚ್ಚಿ ಶಾಖೆಯಲ್ಲಿ ಗ್ರಾಹಕ ಸಂಪರ್ಕ ವಿಭಾಗದ ಟೆಲಿಕಾಂ ತಂತ್ರಜ್ಞಳಾಗಿ ಕೆಲಸ ಮಾಡುತ್ತಿದ್ದಳು. ರೆಹಾನಾ ಫಾತಿಮಾ ಬಿಎಸ್​ಎನ್​ಎಲ್​ನ ಪಳರಿವತ್ತಮ್ ಟೆಲಿಫೋನ್​ ಎಕ್ಸ್​ಚೇಂಜ್​ನಲ್ಲಿ ಟೆಲಿಕಾಂ ತಂತ್ರಜ್ಞರಾಗಿ ಕೆಲಸ ಮಾಡುತ್ತಿದ್ದರು. ಅದಕ್ಕೂ ಮೊದಲು ಕೊಚ್ಚಿ ಶಾಖೆಯಲ್ಲಿ ಇದ್ದ ಅವರನ್ನು ಶಬರಿಮಲೆ ವಿಚಾರದಲ್ಲಿ ಗಲಾಟೆಯಾದ ಬಳಿಕ ಪಳರಿವತ್ತಮ್ ಪ್ರದೇಶಕ್ಕೆ ವರ್ಗಾವಣೆ ಮಾಡಲಾಗಿತ್ತು.. ರೆಹಾನಾ ವರ್ಗಾವಣೆ ವಿಚಾರ ತಿಳಿಯುತ್ತಿದ್ದಂತೆ ಶಬರಿಮಲೆ ಕರ್ಮ ಸಮಿತಿ ಪಳರಿವತ್ತಮ್​ ಬಿಎಸ್​ಎನ್​ಎಲ್​ ಕೇಂದ್ರದ ಬಳಿ ಪ್ರತಿಭಟನೆ ನಡೆಸಿ, ಆಕೆಯನ್ನು ಅಲ್ಲಿಂದ ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿತ್ತು.
ಶಬರಿಮಲೆ ದೇಗುವ ಪ್ರವೇಶಿಸಲು ಪ್ರಯತ್ನಿಸಿ ವಿಫಲವಾಗಿದ್ದ ರೆಹಾನಾ ಫಾತಿಮಾ ಮನೆಯನ್ನು ದುಷ್ಕರ್ಮಿಗಳು ಈಗಾಗಲೇ ಧ್ವಂಸಗೊಳಿಸಿದ್ದರು. ಅಲ್ಲದೆ ಆಕೆ ಲಕ್ಷಾಂತರ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಮೇಲೆ ಎರಡು ದಿನಗಳ ಹಿಂದೆ ಕೇರಳ ಮುಸ್ಲಿಂ ಜಮಾತ್ ಪರಿಷತ್ ಮುಸ್ಲಿಂ ಸಮುದಾಯದಿಂದ ಉಚ್ಚಾಟನೆ ಮಾಡಿತ್ತು.
ಈ ಹಿಂದೆ ಶಬರಿಮಲೆ ಪ್ರವೇಶಿಸಲು ಮುಂದಾಗಿದ್ದ ಕಿಸ್​ ಆಫ್​ ಲವ್ ನ ಆಯೋಜಕಿ, ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾಳನ್ನು ಬಿಎಸ್ ಎನ್ ಎಲ್ ಸಂಸ್ಥೆ ಕೆಲಸದಿಂದ ಅಮಾನತು ಮಾಡಿದೆ. ಶಬರಿಮಲೆ ಕುರಿತಂತೆ ಫೇಸ್ ಬುಕ್ ಪೋಸ್ಟ್ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ರೆಹಾನಾ ಫಾತಿಮಾ ಬಂಧನಕ್ಕೀಡಾಗಿದ್ದು, ಬಿಎಸ್ ಎನ್ ಎಲ್ ಶಾಕ್ ನೀಡಿದ್ದು, ಆಕೆಯ ಕೆಲಸದಿಂದ ಆಕೆಯನ್ನು ಅಮಾನತು ಮಾಡಿದೆ.

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago