Featured

ಹಿಂದುಗಳ ಹೆಸರಿನಲ್ಲಿ ಬಿಜೆಪಿ ಸುಳ್ಳು ಹೇಳುತ್ತಿರುವ ಪಕ್ಷ : ಮಮತಾ ಬ್ಯಾನರ್ಜಿ

ಪುರ್ಬಾ ಮೇದಿನಿಪುರ್: ಬಿಜೆಪಿ ಯು ಹಿಂದೂಗಳ ಹೆಸರಿನಲ್ಲಿ ಸುಳ್ಳು ಹೇಳುತ್ತಿರುವ ಪಕ್ಷ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುಡುಗಿದರು.

ಜಿಲ್ಲೆಯಲ್ಲಿ ಬುಧವಾರ ನಡೆದ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬಿಜೆಪಿಗೆ ಇತಿಹಾಸ ತಿರುಚ ಬಲ್ಲರು ಹೆಸರುಗಳನ್ನು ಬದಲಿಸಬಹುದು ಆದರೆ ಗೇಮ್ ಚೇಂಜರ್ ಆಗಲು ಸಾಧ್ಯವಿಲ್ಲ. ದೇಶದ ಪರಿಸ್ಥಿತಿ ಆಪತ್ತಿನಲ್ಲಿ ಇದೆ. ಅಸ್ಸಾಂನಲ್ಲಿ 40 ಲಕ್ಷ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ ಅದರಲ್ಲಿದ್ದ 23 ಲಕ್ಷ ಹಿಂದುಗಳು ಬೆಂಗಾಳಿಗಳು. ಹಿಂದುಗಳ ಹೆಸರಲ್ಲಿ ಸುಳ್ಳು ಹೇಳುತ್ತಿರುವವರು ಇದನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಗುಡುಗಿದರು.

ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಅಂತಿಮ ಪಟ್ಟಿಯ ವಿರುದ್ಧ ನವೆಂಬರ್‌ 16ರಂದು ಮಾತನಾಡಿದ್ದ ಅವರು, ಎನ್‌ಆರ್‌ಸಿ ವಿರುದ್ಧ ಚಳುವಳಿ ಮುಂದುವರಿಸುವಂತೆ ಅಸ್ಸಾಂ ಜನರಿಗೆ ಕರೆ ನೀಡಿದ್ದರು. ಜೊತೆಗೆ ಟಿಎಂಸಿ ಬೆಂಬಲ ನೀಡುವುದಾಗಿ ಹೇಳಿದ್ದರು.

ಎನ್ ಆರ್ ಸಿ ಪಟ್ಟಿಯಿಂದ ನಿಜವಾದ ನಾಗರಿಕರ ಹೆಸರುಗಳನ್ನು ಕೈ ಬಿಡಲಾಗಿದೆ ಅಸ್ಸಾಂ ಬಿಹಾರ ಹಾಗೂ ಬಂಗಾಳಿ ಗಳನ್ನು ಬಲವಂತವಾಗಿ ಪಟ್ಟಿಯಿಂದ ಹೊರ ಹಾಕಲಾಗಿದೆ.. ಪಟ್ಟಿಯಲ್ಲಿ ನಿಮ್ಮ ತಾಯಿಯ ಹೆಸರು ಇದೆ ಆದರೆ ತಂದೆಯ ಹೆಸರು ಇಲ್ಲ ಎಂಬುದನ್ನು ಸುಮ್ಮನೆ ಕಲ್ಪಿಸಿಕೊಳ್ಳಿ ನಿಮ್ಮ ಮಗನ ಹೆಸರನ್ನು ಉಲ್ಲೇಖಿಸಲಾಗಿದೆ ಆದರೆ ಮಗಳ ಹೆಸರನ್ನು ಕೈಬಿಡಲಾಗಿದೆ ಎಂಬುದನ್ನು ಊಹಿಸಿ ಪಟ್ಟಿಯ ನಿಜ ಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ ಎಂದು ಹೇಳಿದ್ದರು.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಎಲ್ಲ ವಿರೋಧ ಪಕ್ಷಗಳು ಒಂದಾಗಬೇಕು ಎಂದು ಕರೆ ನೀಡಿದರು.

vishwanews24

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago