Featured

ಹಿಂದುತ್ವದ ರಕ್ಷಣೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡುವ ನನಗೆ ಕಾರ್ಕಳದಲ್ಲಿ ಗೆಲುವು ನಿಶ್ಚಿತ : ಪ್ರಮೋದ್ ಮುತಾಲಿಕ್ – Vishwanews24

ಹಿಂದುತ್ವದ ರಕ್ಷಣೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡುವ ನನಗೆ ಕಾರ್ಕಳದಲ್ಲಿ ನಿಶ್ಚಿತವಾಗಿಯೂ ಗೆಲುವು ಸಿಗಲಿದೆ : ಪ್ರಮೋದ್ ಮುತಾಲಿಕ್

ಮೈಸೂರು:’‘ಹಿಂದುತ್ವದ ರಕ್ಷಣೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಲುವಾಗಿ ಕಾರ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ನನಗೆ ನಿಶ್ಚಿತವಾಗಿಯೂ ಗೆಲುವು ಸಿಗಲಿದೆ” ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬುಧವಾರ ಹೇಳಿಕೆ ನೀಡಿದ್ದಾರೆ.

ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ,”ಶಿಷ್ಟರ ರಕ್ಷಣೆಯಾಗಲಿ, ದುಷ್ಟರಿಗೆ ಶಿಕ್ಷೆಯಾಗಲಿ ಎಂದು ಬೇಡಿಕೊಳ್ಳಲು ಚಾಮುಂಡಿ ಬೆಟ್ಟಕ್ಕೆ ಹೋಗಿ ಆಶೀರ್ವಾದ ಪಡೆದುಕೊಂಡು ಹೋಗಲು ಬಂದಿದ್ದೆ” ಎಂದರು.

” ಹಾಸನ ಜಿಲ್ಲೆಯ ಬೇಲೂರಿನಲ್ಲಿ ಚನ್ನಕೇಶವಸ್ವಾಮಿ ರಥೋತ್ಸವದ ವೇಳೆ ಕುರಾನ್ ಪಠಣ ಮಾಡಿದ್ದು ಅಕ್ಷಮ್ಯ ಅಪರಾಧ.ಅಲ್ಲಿನ ಸ್ಥಳೀಯ ಜೆಡಿಎಸ್ ನಾಯಕರ ಒತ್ತಡಕ್ಕೆ ಮಣಿದು ಕುರಾನ್ ಪಠಣಕ್ಕೆ ಅವಕಾಶ ಮಾಡಿಕೊಡಲಾಗಿದೆ.ಚುನಾವಣೆ ದೃಷ್ಟಿಯಿಂದ ಕುರಾನ್ ಪಠಣಕ್ಕೆ ಜೆಡಿಎಸ್ ನಾಯಕರು ಒತ್ತಡ ಹೇರಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಲಾಗಿದೆ. ಹಾಗಾಗಿ ಅಲ್ಲಿನ ಜಿಲ್ಲಾಡಳಿತ, ಚುನಾವಣಾ ಅಧಿಕಾರಿಗಳ‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಕಿಡಿ ಕಾರಿದರು.

”ನಂಜನಗೂಡಿನ ಶ್ರೀಕಂಠೇಶ್ವಸ್ವಾಮಿ ದೇಗುಲದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣವನ್ನು ಸ್ಥಳೀಯ ಶಾಸಕರು, ಶಾದಿ ಮಹಲ್ ನಿರ್ಮಾಣಕ್ಕೆ ಬಳಕೆ ಮಾಡಿಕೊಳ್ಳಲು ಮುಂದಾಗಿರುವುದು ಖಂಡನೀಯ.ಶಾದಿ ಮಹಲ್ ನಿರ್ಮಾಣಕ್ಕೆ ದೇಗುಲದ ಹುಂಡಿ ಹಣ ಬಳಕೆ ಮಾಡಿಕೊಳ್ಳಲು ಮುಂದಾಗಿರುವ ಶಾಸಕ ನಿಲುವು ಸರಿಯಾದ ಕ್ರಮವಲ್ಲ.ಹೀಗಾಗಿ ಈ ನಿರ್ಧಾರವನ್ನು ಕೂಡಲೇ ಕೈಬಿಡಬೇಕು‌. ಧಾರ್ಮಿಕ ದತ್ತಿ ಇಲಾಖೆಯ ನಿಯಮಕ್ಕೆ ವಿರುದ್ಧವಾಗಿ ದೇಗುಲದ ಹುಂಡಿ ಹಣವನ್ನು ಶಾದಿ ಮಹಲ್ ನಿರ್ಮಾಣಕ್ಕೆ ನೀಡಬಾರದು.ದೇಗುಲದ ಹುಂಡಿ ಹಣವನ್ನು ಹಿಂದೂಗಳ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು”ಎಂದರು.

”ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೂ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡಲಾಗುತ್ತಿದೆ.ಅಕ್ರಮ ಗೋ ಸಾಗಾಟ ತಡೆಗಟ್ಟಲು ಮುಂದಾದ ಪುನಿತ್ ಕೆರೆಹಳ್ಳಿ ವಿರುದ್ಧ ಎಫ್ ಐ ಆರ್ ದಾಖಲಿಸಿರುವುದು ಸರಿಯಾದ ಕ್ರಮವಲ್ಲ.ಈ ವಿಚಾರದಲ್ಲಿ ವಿರೋಧ ಪಕ್ಷಗಳ ನಾಯಕರು ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ಧವರ ಪರ ನಿಂತಿರುವುದು ಸರಿಯಲ್ಲ.ಅಕ್ರಮ ಗೋ ಸಾಗಾಟ ತಡೆಯಲು ಮುಂದಾದವರ ಪರ ನಿಲ್ಲಬೇಕು” ಎಂದರು.

Vishwa News 24

Recent Posts

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

15 minutes ago

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ…

21 minutes ago

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…

28 minutes ago

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

14 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

22 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

22 hours ago