ಲಕ್ನೋ : ಶ್ರೀ ರಾಮನಿಗೆ ಕೂಡ ದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಕೆಲ ದಿನಗಳ ಹಿಂದೆ ಹೇಳಿ ಸುದ್ದಿಯಾಗಿದ್ದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಇದೀಗ ಇನ್ನೊಂದು ವಿವಾದಾತ್ಮಕ ಹೇಳಿಕೆ ನೀಡಿ ಹಿಂದುತ್ವ ಉಳಿಯಬೇಕಾದರೆ ಹಿಂದೂ ದಂಪತಿಗಳು ಕನಿಷ್ಠ 5 ಮಕ್ಕಳನ್ನು ಪಡೆಯಬೇಕು ಎಂದಿದ್ದಾರೆ.
ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು ದೇಶದಲ್ಲಿ ಹಿಂದೂಗಳ ಜನಸಂಖ್ಯೆಯನ್ನು ಹೆಚ್ಚಿಸಲು ಇದು ಅಗತ್ಯವಾಗಿದೆ ಎಂದರು. ”ಪ್ರತಿಯೊಂದು ದಂಪತಿ ಕನಿಷ್ಠ 5 ಮಕ್ಕಳನ್ನು ಪಡೆಯಬೇಕೆಂಬುದು ಪ್ರತಿಯೊಬ್ಬ ಮಹಂತನ ಆಸೆಯಾಗಿದೆ. ಈ ರೀತಿಯಾಗಿ ಜನಸಂಖ್ಯೆ ನಿಯಂತ್ರಣ ದಲ್ಲಿರುತ್ತದೆ ಹಾಗೂ ಹಿಂದುತ್ವ ಕೂಡ ಭದ್ರಗೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶದ ಬಲ್ಲಿಯ ಕ್ಷೇತ್ರದ ಶಾಸಕನಾಗಿರುವ ಸಿಂಗ್ ಈ ಹಿಂದೆ ”ಭಾರತ್ ಮಾತಾ ಕಿ ಜೈ ಹೇಳದವರು ಪಾಕಿಸ್ತಾನಿಗಳು” ಎಂದು ಹೇಳಿ ವಿವಾದಕ್ಕೀಡಾಗಿದ್ದರು. ”ಸರಕಾರಿ ಅಧಿಕಾರಿಗಳಿಗಿಂತ ಸೂಳೆಯರು ಉತ್ತಮರಾಗಿದ್ದಾರೆ,” ”ಪ್ರಧಾನಿ ನರೇಂದ್ರ ಮೋದಿ ಶ್ರೀ ರಾಮನ ಅವತಾರ” ಹಾಗೂ ”ಮೊಬೈಲ್ ಗಳು ಅತ್ಯಾಚಾರಕ್ಕೆ ಕಾರಣ” ಎಂಬಿತ್ಯಾದಿ ಹೇಳಿಕೆಗಳಿಂದಲೂ ಅವರು ಸುದ್ದಿಯಾಗಿದ್ದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]