Categories: ಉಡುಪಿ

ಹಿಂದುತ್ವ ಸಿದ್ಧಾಂತ ಇರುವವರೆಗೆ ಬಿಜೆಪಿ ಗೆಲುವು ಸಾಧಿಸುತ್ತದೆ : ಸುಬ್ರಮಣಿಯನ್ ಸ್ವಾಮಿ- Vishwanews24

‘ಬಿಜೆಪಿ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸುತ್ತಿಲ್ಲ..

ಹಿಂದುತ್ವ ಸಿದ್ಧಾಂತ ಇರುವವರೆಗೆ ಬಿಜೆಪಿ ಗೆಲುವು ಸಾಧಿಸುತ್ತದೆ : ಸುಬ್ರಮಣಿಯನ್ ಸ್ವಾಮಿ- Vishwanews24

ನವದೆಹಲಿ : ”ಬಿಜೆಪಿ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸುತ್ತಿಲ್ಲ” ಎಂದು ಪಕ್ಷದ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಫಾರಿನ್ ಕರೆಸ್ಪಾಂಡೆಂಟ್ಸ್ ಕ್ಲಬ್ ಆಯೋಜನೆ ಮಾಡಿದ್ದ ವೆಬಿನಾರ್‌ನಲ್ಲಿ ಮಾತನಾಡಿದ ಅವರು, ”ಬಿಜೆಪಿ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಸುತ್ತಿಲ್ಲ. ಸಂವಿಧಾನದಲ್ಲಿಯೂ ಆ ರೀತಿ ಮಾಡಲು ಅವಕಾಶವಿಲ್ಲ ಎಂದು ಹೇಳಿದ್ದು ಈ ವೇಳೆ ಹಿಂದುತ್ವ ಅಸ್ತಿತ್ವದಲ್ಲಿ ಇರುವವರೆಗೂ ಬಿಜೆಪಿ ಅಧಿಕಾರದಲ್ಲಿ ಇರುತ್ತದೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ವಿರುದ್ದ ಆರೋಪಗಳನ್ನು ಮಾಡಿದ ಅವರು, ”ಹಲವಾರು ವರ್ಷಗಳಿಂದ ಕಾಂಗ್ರೆಸ್‌ ಧರ್ಮದ ಹೆಸರಲ್ಲಿ ರಾಜಕಾರಣ ಮಾಡುತ್ತಿದೆ. ಈ ಹಿಂದೆ ಕಾಂಗ್ರೆಸ್‌ ಅಲ್ಪಸಂಖ್ಯಾತರನ್ನು ಒಂದುಗೂಡಿಸಿ ಹಿಂದೂಗಳನ್ನು ವಿಭಜನೆ ಮಾಡಿ ಸರ್ಕಾರ ರಚಿಸಿತ್ತು. ಆರ್ಯರು, ದ್ರಾವಿಡರು, ಜಾತಿ ಮತ್ತಿತರರ ಇತಿಹಾಸ ವಿಷಯವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಸರ್ಕಾರ ರಚಿಸಿದೆ. ಕಾಂಗ್ರೆಸ್‌ನ ಒಡೆದು ಆಳುವ ನೀತಿಯಿಂದಾಗಿ ಈಗ ಅದಕ್ಕೆ ಮತ್ತೆ ಸರ್ಕಾರ ರಚಿಸಲು ಸಾಧ್ಯವಾಗುತ್ತಿಲ್ಲ” ಎಂದು ಹೇಳಿದರು.

ಇನ್ನು ಇದೇ ಸಂದರ್ಭದಲ್ಲಿ , ”ಹಿಂದೂಗಳು ಎಲ್ಲಾ ಭಿನ್ನಾಭಿಪ್ರಾಯ ತೊರೆದು ರಾಜಕೀಯವಾಗಿ ಒಂದಾಗಬೇಕು” ಎಂದು ಹೇಳಿದ ಅವರು, ”ಬಿಜೆಪಿಯ ಮತ ಪ್ರಮಾಣ ಏರಲು ಹಿಂದುತ್ವ ಸಿದ್ದಾಂತ ಕಾರಣ. ಹಿಂದುತ್ವ ಸಿದ್ಧಾಂತ ಇರುವವರೆಗೆ ಬಿಜೆಪಿ ಗೆಲುವು ಸಾಧಿಸುತ್ತದೆ. ಆರ್ಥಿಕ ಸಾಧನೆ ಲೆಕ್ಕಕ್ಕೆ ಬರುವುದಿಲ್ಲ. ಆದರೆ ತೀರಾ ಕಳಪೆಯಾಗದಂತೆ ನೋಡಿಕೊಳ್ಳಬೇಕಾಗಿದೆ” ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago