ಬೆಂಗಳೂರು: ಹಿಂದೂಗಳು ರಾಮಮಂದಿರ ಕಟ್ಟುವುದರಲ್ಲಿ, ಮುಸ್ಲಿಂರು ಮಸೀದಿ ಕಟ್ಟುವುದರಲ್ಲಿ ಸಂತಸದಿಂದ ಮುಂದಾಗುತ್ತಿರುವುದು ಕಂಡು ನನಗೆ ಖುಷಿ ಆಗುತ್ತಿದೆ. ಆದ್ರೆ, ನಿಜವಾದ ಸಂತೋಷ ಒಗ್ಗಟ್ಟಿನಲ್ಲಿದೆ ಎಂದು ಕಾಂಗ್ರೆಸ್ ಮಾಜಿ ಸಂಸದೆ, ನಟಿ ರಮ್ಯಾ ಹೇಳಿದ್ದಾರೆ.
ರಾಮಮಂದಿರ ವಿಚಾರವಾಗಿ ಮೊದಲ ಬಾರಿಗೆ ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ರಮ್ಯಾ, ಹಿಂದೂಗಳು ಸಂತೋಷದಿಂದ ರಾಮ ಮಂದಿರ ನಿರ್ಮಾಣ ಮಾಡಲು ಮುಂದಾಗುತ್ತಿರುವುದನ್ನು ಕಂಡು ನನಗೆ ಸಂತಸವಿದೆ. ಮುಸ್ಲಿಮರು ಸಂತೋಷದಿಂದ ಮಸೀದಿ ನಿರ್ಮಾಣಕ್ಕೆ ಮುಂದಾಗಿರುವುದನ್ನು ನೋಡಿ ನನಗೆ ಸಂತಸವಿದೆ. ಆದರೆ ಇಬ್ಬರೂ ಸಂತೋಷವಾಗಿರಲು ಅಥವಾ ದೇವರನ್ನು ಅರಿತುಕೊಳ್ಳಲು ದೇವಾಲಯ ಅಥವಾ ಮಸೀದಿ ಅಗತ್ಯವಿಲ್ಲ ಎಂದು ಅವರಿಗೆ ತಿಳಿದಾಗ ನನಗೆ ಹೆಚ್ಚು ಸಂತೋಷವಾಗುತ್ತದೆ. ನಿಜವಾದ ಸಂತೋಷ ಒಗ್ಗಟ್ಟಿನಲ್ಲಿದೆ. ಹೊರಗಡೆ ದೇವರಿಲ್ಲ. ದೇವರು ನಮ್ಮ ಒಳಗಡೆಯೇ ಇದ್ದಾನೆ ಎಂದು ಬರೆದುಕೊಂಡಿದ್ದಾರೆ. ಇನ್ನು ರಾಜಕೀಯಕ್ಕೆ ಬಲಿಯಾಗಬೇಡಿ. ರಾಜಕೀಯ ಶಕ್ತಿ ಮತ್ತು ನಿಯಂತ್ರಣಕ್ಕಾಗಿ ಸೃಷ್ಟಿಸುವ ಬಿಕ್ಕಟ್ಟಿಗೆ ಬಲಿಯಾಗಬೇಡಿ. ಪ್ರಶ್ನಿಸುವ ಮೂಲಕ ಉತ್ತುಂಗಕ್ಕೆ ಏರಿ ಎಂದು ಹೇಳಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…