ಬೆಂಗಳೂರು: ಹಿಂದೂಗಳ ಜಾತ್ರೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ನಿಷೇಧ ಹೇರಿರುವುದಕ್ಕೆ ಬಿಜೆಪಿ ಕುಮ್ಮಕ್ಕು ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಯು ಟಿ ಖಾದರ್ ಆರೋಪಿಸಿದ್ದಾರೆ. ಈ ವಿಚಾರವಾಗಿ ಬಿಜೆಪಿ ಸರ್ಕಾರ ಮೌನವಾಗಿದ್ದು, ಒಳಗೊಳಗೆ ಖುಷಿ ಪಡುತ್ತಿದೆಯಾ? ಎಂದು ವಿಧಾನಸಭೆಯ ಕಾಂಗ್ರೆಸ್ ಉಪನಾಯಕ ಯು.ಟಿ ಖಾದರ್ ಪ್ರಶ್ನಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ ದೇಶ ವಿವಿಧತೆಯಲ್ಲಿ ಏಕತೆ ಹೊಂದುರುವ ದೇಶವಾಗಿದೆ. ಇಲ್ಲಿ ಎಲ್ಲಾ ಧರ್ಮೀಯರು ಸಹಬಾಳ್ವೆಯಿಂದ ಬದುಕುತ್ತಿದ್ದಾರೆ. ಆದರೆ ಕೆಲವರು ಧರ್ಮಗಳ ನಡುವೆ ಕಂದಕವನ್ನ ಸೃಷ್ಟಿಸುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಕರಾವಳಿ ಭಾಗದಲ್ಲಿ ಕೆಲ ಹಿತಾಸಕ್ತಿಗಳು ಭಿತ್ತಿ ಪತ್ರಗಳನ್ನ ಹಾಕುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ, ದ್ವೇಷ ಸೃಷ್ಟಿಸಲು ಹೊರಟಿದ್ದಾರೆ. ಮುಲ್ಕಿ ಸೇರಿದಂತೆ ಕೆಲವೆಡೆ ಭಿತ್ತಿ ಪತ್ರಗಳನ್ನ ಹಾಕಲಾಗಿದೆ. ಇದೊಂದು ಅಸಹ್ಯ ಕೃತ್ಯವಾಗಿದೆ. ಹಿಂದೂ ಸಹೋದರರು ಬೆಂಬಲ ಕೊಡಬಾರದು ಎಂದು ಮನವಿ ಮಾಡಿದ್ದಾರೆ.
ಜಾತ್ರೆಗಳಲ್ಲಿ ಮುಸ್ಲಿಂ ಸಮುದಾಯದವರು ವ್ಯಾಪಾರ ನಡೆಸುವುದಕ್ಕೆ ಹಿಂದೂ ಸಂಘಟನೆಗಳ ವಿರೋಧ ವ್ಯಕ್ತಪಡಿಸುತ್ತಿದೆ. ಈ ವಿಚಾರವಾಗಿ ಬಿಜೆಪಿ ಸರ್ಕಾರ ಈ ವಿಚಾರವಾಗಿ ಮೌನವಾಗಿದೆ. ಒಳಗೊಳಗೆ ಖುಷಿ ಪಡುತ್ತಿದೆಯಾ? ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಆಢಳಿತ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…