Featured

ಹಿಂದೂಗಳ ಧಾರ್ಮಿಕ ಉತ್ಸವದಲ್ಲಿ ಹಿಂದೂ ಧ್ವಜ ಹಿಡಿದು ಉದ್ಘಾಟನೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ : ಪ್ರೊ. ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ – vishwanews24

ನಿಮ್ಮ ಬಣ ರಾಜಕೀಯಕ್ಕೆ ಜಿಲ್ಲಾಧಿಕಾರಿಗಳನ್ನು ಬಲಿಪಶು ಮಾಡಬೇಡಿ..

ಇಲ್ಲಿ ಹಾರಿಸಲಾದದ್ದು ಪ್ರತಿಯೊಂದು ಹಿಂದೂ ದೇವಾಲಯದಲ್ಲೂ ಹಾರುವ ಪವಿತ್ರ ಭಗವಾ ಧ್ವಜವೇ ಹೊರತು ಯಾವುದೇ ರಾಷ್ಟ್ರವಿರೋಧಿ ಧ್ವಜವಲ್ಲ..

ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಈ ನಿಲುವು ಮುಂದಿನ ದಿನಗಳಲ್ಲಿ ಅವರಿಗೆ ಮುಳುವಾಗಬಹುದು : ಪ್ರೊ. ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ

ಉಡುಪಿ: ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ತನಕ ಒಂದಾಗಿದ್ದ ಮನಸ್ಸುಗಳು, ಪರ್ಯಾಯ ಮುಗಿದ ತಕ್ಷಣವೇ ಒಣ ಬಣ ರಾಜಕೀಯಕ್ಕೆ ತಿರುಗಿರುವುದು ದುರದೃಷ್ಟಕರ ಎಂದು ಪ್ರೊ. ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ ಟೀಕಿಸಿದ್ದಾರೆ.

ಪರ್ಯಾಯ ಮಹೋತ್ಸವವನ್ನು ಸರ್ವ ಹಿಂದೂಗಳು ಒಂದಾಗಿ ಆಚರಿಸುವ ಸಂದರ್ಭದಲ್ಲಿ, ಅಷ್ಟಮಠದ ಯತಿಗಳ ಸಮ್ಮುಖದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡುವ ವೇಳೆ ಜಿಲ್ಲಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉಡುಪಿ ಶಾಸಕರು ವೇದಿಕೆಗೆ ಬಂದು ಹಿಂದೂ ಧ್ವಜವನ್ನು ಜಿಲ್ಲಾಧಿಕಾರಿಗಳ ಕೈಗೆ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಸಂದರ್ಭ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಯಾರೇ ಜಿಲ್ಲಾಧಿಕಾರಿಯಾಗಿದ್ದರೂ ಅದನ್ನು ನಿರಾಕರಿಸುವುದು ಸಾಧ್ಯವಿಲ್ಲ, ಹಾಗೆಯೇ ಅದು ಅಸಾಧುವೂ ಅಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಹಿಂದೂಗಳ ಧಾರ್ಮಿಕ ಉತ್ಸವದಲ್ಲಿ ಹಿಂದೂ ಧ್ವಜ ಹಿಡಿದು ಉದ್ಘಾಟನೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ. ಅದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಥವಾ ಜಿಲ್ಲಾ ಉಸ್ತುವಾರಿ ಸಚಿವರು ಇದ್ದಿದ್ದರೂ ಅವರು ಸಹ ಇದೇ ರೀತಿಯಲ್ಲಿ ನಡೆದುಕೊಂಡಿರುತ್ತಿದ್ದರು. ಇದನ್ನು ಹೊರತುಪಡಿಸಿ ಕಾಂಗ್ರೆಸ್ ಪಕ್ಷ ಈ ವಿಚಾರವನ್ನು ಯಾವ ರೀತಿಯಲ್ಲಿ ಪರಿಗಣಿಸುತ್ತಿತ್ತೋ ಎಂಬುದನ್ನು ಆತ್ಮವಿಮರ್ಶೆ ಮಾಡಿಕೊಳ್ಳಬೇಕಾಗಿದೆ.

ಹಿಂದೂ ಧಾರ್ಮಿಕತೆ ಹಾಗೂ ಭಗವಾ ಧ್ವಜದ ವಿರುದ್ಧ ಇಷ್ಟು ಸಂಕುಚಿತ ಮನೋಭಾವ ತೋರಿಸುತ್ತಾ, ಜಾತ್ಯತೀತ ಸಂವಿಧಾನದ ಸಿದ್ಧಾಂತದ ಬಗ್ಗೆ ಮಾತನಾಡುವವರು ನಿಜವಾದ ಜಾತ್ಯತೀತವಾದಿಗಳಾಗಿದ್ದರೆ, ಹಿಂದೂ ಧಾರ್ಮಿಕ ಕ್ಷೇತ್ರಗಳನ್ನು ರಾಜಕೀಯ ಪ್ರೇರಿತ ಸಚಿವ ಸಂಪುಟದ ವ್ಯಾಪ್ತಿಯಿಂದ ಹೊರಗಿಡಬೇಕಾಗಿತ್ತು. ಧಾರ್ಮಿಕ ದತ್ತಿ ಇಲಾಖೆ, ಅದಕ್ಕೆ ಸಂಬಂಧಿಸಿದ ಆಡಳಿತ ವ್ಯವಸ್ಥೆಗಳು ಜಾತ್ಯತೀತತೆಯ ಹೆಸರಿನಲ್ಲಿ ಯಾಕೆ ಅಗತ್ಯವೆಂಬುದನ್ನು ಕಾಂಗ್ರೆಸ್ ಪಕ್ಷ ಸ್ಪಷ್ಟಪಡಿಸಬೇಕು ಎಂದು ಅವರು ಪ್ರಶ್ನಿಸಿದರು.

ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಈ ನಿಲುವು ಮುಂದಿನ ದಿನಗಳಲ್ಲಿ ಅವರಿಗೆ ಮುಳುವಾಗಬಹುದು. ಒಟ್ಟಿನಲ್ಲಿ ಜಿಲ್ಲಾಧಿಕಾರಿಗಳನ್ನು ಅನಗತ್ಯ ರಾಜಕೀಯ ವಿವಾದಕ್ಕೆ ಎಳೆದು ಬಲಿಪಶು ಮಾಡುವುದು ಸರಿಯಲ್ಲ. ಇಲ್ಲಿ ಹಾರಿಸಲಾದದ್ದು ಪ್ರತಿಯೊಂದು ಹಿಂದೂ ದೇವಾಲಯದಲ್ಲೂ ಹಾರುವ ಪವಿತ್ರ ಭಗವಾ ಧ್ವಜವೇ ಹೊರತು ಯಾವುದೇ ರಾಷ್ಟ್ರವಿರೋಧಿ ಧ್ವಜವಲ್ಲ ಎಂದು ಪ್ರೊ. ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ ಹೇಳಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

20 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

22 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

23 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

23 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

23 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

23 hours ago