Featured

ಹಿಂದೂಗಳ ಹೋರಾಟಕ್ಕೆ ಜಯ : ದತ್ತಪೀಠದಲ್ಲಿ ಪೂಜೆಗೆ ಮೌಲ್ವಿ ನೇಮಕ ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್ -Vishwanews24

ಹಿಂದೂಗಳ ಹೋರಾಟಕ್ಕೆ ಜಯ : ದತ್ತಪೀಠದಲ್ಲಿ ಪೂಜೆಗೆ ಮೌಲ್ವಿ ನೇಮಕ ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್ -Vishwanews24

ಬೆಂಗಳೂರು: ದತ್ತಪೀಠದಲ್ಲಿ ಪೂಜೆಗೆ ಮೌಲ್ವಿ ನೇಮಕ ಮಾಡಿದ್ದ ಹಿಂದಿನ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್, ಪೂಜಾ ವಿಧಾನದ ಕುರಿತು ಹೊಸದಾಗಿ ತೀರ್ಮಾನ ತೆಗೆದುಕೊಳ್ಳುವಂತೆ ನೀಡಿರುವ ಆದೇಶವನ್ನು ರಾಜ್ಯ ಬಿಜೆಪಿ ಮುಖಂಡರು ಸ್ವಾಗತಿಸಿದ್ದಾರೆ.

ದತ್ತ ಪೀಠದ ವಿಚಾರದಲ್ಲಿ ಹಿಂದೂಗಳ ಹೋರಾಟಕ್ಕೆ ಜಯ ಸಿಕ್ಕಿದೆ. ದತ್ತ ಮಾಲಾಧಾರಿಗಳು ಮತ್ತು ದತ್ತ ಪೀಠದ ಮೇಲೆ ನಂಬಿಕೆ ಇರಿಸಿರುವ ಅಸಂಖ್ಯಾತ ಭಕ್ತರಿಗೆ ಶುಭ ವಿಚಾರ ಬಂದಿದೆ. ಹೈಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸುತ್ತೇನೆ. ಯಾವತ್ತೂ ಸತ್ಯಕ್ಕೆ ಜಯ ಖಚಿತ ಎಂಬುದು ಇದರಿಂದ ಋಜುವಾತಾಗಿದೆ. ಮೌಲ್ವಿ ನೇಮಕ ಆದೇಶ ರದ್ದು ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಮೌಲ್ವಿ ನೇಮಿಸುವ ಕುರಿತ ಧಾರ್ಮಿಕ ದತ್ತಿ ಇಲಾಖೆಯ ಆದೇಶವನ್ನು ರದ್ದು ಮಾಡಿರುವ ಹೈಕೋರ್ಟ್ ತೀರ್ಪಿನಿಂದ ಹಿಂದೂಗಳಿಗೆ ಸಂತೋಷವಾಗಿದೆ. ಇದರಿಂದ ನ್ಯಾಯಾಂಗದ ಮೇಲಿನ ಭರವಸೆಯೂ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಇದನ್ನೂ ಓದಿ : ಶಿರೂರು ಮಠಕ್ಕೆ ಅಪ್ರಾಪ್ತ ಪೀಠಾಧಿಪತಿ ನೇಮಕ ವಿವಾದ : ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ -Vishwanews24

ದತ್ತ ಪೀಠದ ಕುರಿತ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ದತ್ತ ಪೀಠದ ಪೂಜೆಗೆ ಹಿಂದು ಅರ್ಚಕರ ನೇಮಕವನ್ನು ಎತ್ತಿಹಿಡಿದಿದೆ ಹೈಕೋರ್ಟ್. ದಶಕಗಳಿಂದ ಹೋರಾಟ ನಡೆಸಿಕೊಂಡು ಬಂದ ಭಕ್ತಾದಿ/ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಸಂಸದ ಬಿವೈ ರಾಘವೇಂದ್ರ ಟ್ವೀಟ್ ಮಾಡಿದ್ದಾರೆ.

ಚಿಕ್ಕಮಗಳೂರಿನ ಪವಿತ್ರ ದತ್ತಪೀಠ ಹೋರಾಟಕ್ಕೆ ಹಿಂದೂಗಳಿಗೆ ಮೊದಲ ಗೆಲುವು ಸಿಕ್ಕಿದೆ. ಪುರಾತನ ದತ್ತಪೀಠಕ್ಕೆ ಹಿಂದಿನ ಸರ್ಕಾರ ನೇಮಿಸಿದ್ದ ಮೌಲ್ವಿ ನೇಮಕವನ್ನು ರದ್ದುಗೊಳಿಸುವಂತೆ ರಾಜ್ಯ ಹೈಕೋರ್ಟ್ ಆದೇಶಿಸಿದೆ. ಹಿಂದೂಗಳ ಭಾವನೆಗೆ ಬೆಲೆ ಕೊಟ್ಟ ನ್ಯಾಯಾಲಯಕ್ಕೆ ಧನ್ಯವಾದಗಳು. ದತ್ತಪೀಠ ನಮ್ಮದೆ… ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ದತ್ತ ಭಕ್ತರ ದಶಕಗಳ ಹೋರಾಟಕ್ಕೆ ಹೈಕೋರ್ಟಿನಲ್ಲಿ ಜಯ. ದತ್ತಪೀಠ ಪೂಜೆಗೆ ಮೌಲ್ವಿ ನೇಮಕ ರದ್ದು ಮಾಡಿದ ಹೈಕೋರ್ಟಿನ ತೀರ್ಪನ್ನು ಸ್ವಾಗತಿಸುತ್ತೇನೆ. ಸತ್ಯಮೇವ ಜಯತೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.

ಮಂಗಳೂರು: ಶಿರಾಡಿ ರಸ್ತೆ ಎಲ್ಲಾ ಬಗೆಯ ವಾಹನ ಸಂಚಾರಕ್ಕೆ ಅವಕಾಶ -Vishwanews24

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

23 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

24 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago