ಉಳ್ಳಾಲ: ಹಿಂದೂ ಹೆಸರಿನಲ್ಲಿ ಕುಂಪಲದ ಯುವತಿಯನ್ನು ಮದುವೆಯಾಗಿದ್ದ ಸುಳ್ಯ ಮೂಲದ ಮಹಮ್ಮದ್ ಹಾರೂನ್ ಯಾನೆ ಬಶೀರ್(28)ಗೆ ಯುವತಿ ಮನೆಯವರು ಮತ್ತು ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ಬುಧವಾರ ನಡೆದಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ದೂರವಾಣಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಹಾರೂನ್ ಮೂರು ವರ್ಷಗಳ ಹಿಂದೆ ಪರಿಚಯವಾಗಿದ್ದ ತನಗಿಂತ ಸುಮಾರು 12 ವರ್ಷ ಹೆಚ್ಚು ಪ್ರಾಯದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ತಾನು ಅರುಣ್ ಪೂಜಾರಿ ಎಂದು ಕುಂಪಲದಲ್ಲಿ ಹೇಳಿಕೊಂಡಿದ್ದ ಈತನ ನಿಜ ಬಣ್ಣ ಏಳು ತಿಂಗಳ ಹಿಂದೆ ಬಯಲಾಗಿತ್ತು. ಯುವತಿಯ ಸಹೋದರಿ ಬ್ಯಾಗ್ ಚೆಕ್ ಮಾಡಿದಾಗ ಈತನ ನಿಜ ಹೆಸರು ಪತ್ತೆಯಾಗಿತ್ತು. ಆವರೆಗೆ ತಾನು ಅನಾಥ ಎಂದು ತಿಳಿಸಿದ್ದ. ಈ ಸಂದರ್ಭದಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಈತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಘಟನೆ ಬಳಿಕ ಯುವತಿಯೊಂದಿಗೆ ಸಂಪರ್ಕ ಇರಲಿಲ್ಲ ಎನ್ನಲಾಗಿದ್ದು, ಬುಧವಾರ ಏಕಾಏಕಿ ಹಾರೂನ್ ಯುವತಿ ಮನೆಗೆ ತೆರಳಿ 60 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದು, ಈ ಸಂದರ್ಭದಲ್ಲಿ ಯುವತಿಯ ಸಹೋದರಿ ಹಾರೂನ್ ಮೇಲೆ ಹಲ್ಲೆ ನಡೆಸಿದ್ದಾರೆ. ಆಗ ಸ್ಥಳೀಯರೂ ಹಾರೂನ್‌ಗೆ ಧರ್ಮದೇಟು ನೀಡಿ ಬಳಿಕ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಹಾರೂನ್‌ನ ಹುಡುಗಿಯ ಚಾಳಿಯಿಂದ ಆತನ ಮನೆಯವರೂ ಈತನನ್ನು ಮನೆಗೆ ಸೇರಿಸಿಕೊಂಡಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…