ಧಾರವಾಡ: ಹಿಂದೂ ಪದವನ್ನು ತಂದಿದ್ದೇ ಕಾಂಗ್ರೆಸ್ ಪಕ್ಷ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆದ ತೊಗಲು ಬೊಂಬೆಯಾಟ ಉತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ವೇಳೆ ಹಿಂದೂ ಎಂಬ ಪದವನ್ನು ತಂದಿದ್ದೇ ಕಾಂಗ್ರೆಸ್ ಪಕ್ಷ. ಈ ದೇಶದಲ್ಲಿ ಹಿಂದೂ ಎಂಬ ಪದವೇ ಇರಲಿಲ್ಲ. ಡಾ.ಅಂಬೇಡ್ಕರ್ ಹಿಂದೂ ಕೋಡ್ ಬಿಲ್ ತರದೇ ಇದ್ದಿದ್ರೆ ನಾವು ಹೀಗೆ ಇರುತ್ತಿರಲಿಲ್ಲ ಎಂದಿದ್ದಾರೆ.
ಹಿಂದೂ ಕೋಡ್ ಬಿಲ್ ತರದೇ ಇದ್ದಿದ್ರೆ ಶೂದ್ರರನ್ನು ಕರೆಯಿರಿ, ಬ್ರಾಹ್ಮಣ, ವೈಷ್ಯರನ್ನು ಕರೆಯಿಸಿ ಎಂಬ ವ್ಯವಸ್ಥೆ ಇರುತ್ತಿತ್ತು. ಇತಿಹಾಸವನ್ನು ಜನ ಓದುವುದಿಲ್ಲ. ಮಾಧ್ಯಮಗಳ ಮೂಲಕ ಸುಳ್ಳು ಹೇಳುವುದೇ ಇವತ್ತಿನ ರಾಜಕಾರಣದಲ್ಲಿ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿಯವರು ಮಾತನಾಡ್ತಾರೆ. ನಮ್ಮ ಬಗ್ಗೆ ಹಿಗ್ಗಾಮುಗ್ಗಾ ಇಲ್ಲಸಲ್ಲದ ವಿಚಾರ ಮಾತಾಡ್ತಾರೆ. ಜನರು ಸಹ ಕಾಂಗ್ರೆಸ್ ಪಕ್ಷವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ಕಾಂಗ್ರೆಸ್ ಪಕ್ಷವನ್ನು ಹಿಂದೂಗಳು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್‌ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…