Featured

ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ : ಪ್ರಿಯಾಂಕ್ ಖರ್ಗೆ ವಿರುದ್ದ 50ಕ್ಕೂ ಹೆಚ್ಚು ಮಠಾಧೀಶರಿಂದ ಸಿಎಂಗೆ ದೂರು – Vishwanews24

ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ : ಪ್ರಿಯಾಂಕ್ ಖರ್ಗೆ ವಿರುದ್ದ 50ಕ್ಕೂ ಹೆಚ್ಚು ಮಠಾಧೀಶರಿಂದ ಸಿಎಂಗೆ ದೂರು

ಬೆಂಗಳೂರು: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ 50ಕ್ಕೂ ಹೆಚ್ಚು ಮಂದಿ ಮಠಾಧೀಶರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ.

ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪ್ರಿಯಾಂಕ್ ಖರ್ಗೆ ದಬ್ಬಾಳಿಕೆ ಹೆಚ್ಚುತ್ತಿದೆ. ಅಲ್ಲದೆ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿ ಬಂಜಾರ ಮಠ ಹಾಗೂ ವೀರಶೈವ ಮಠಾಧೀಶರು ದೂರು ನೀಡಿದ್ದಾರೆ.

ಈಗಾಗಲೇ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವರ ವಿರುದ್ದ ಪ್ರಿಯಾಂಕ್ ಖರ್ಗೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ಅಧಿಕಾರಿ ಅಲೋಕ್‌ಕುಮಾರ್‍ ಅವರು ಪ್ರಿಯಾಂಕ್ ಖರ್ಗೆ ಹೇಳಿದಂತೆಯೇ ಮಾಡುತ್ತಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೆ ದಾಖಲಿಸಿದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಬೇಕು. ಅಲ್ಲದೆ ಈ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಕಾರ್ಯಕರ್ತರ ಮೇಲಾಗುತ್ತಿರುವ ದೌರ್ಜನ್ಯವನ್ನು ತಡೆಗಟ್ಟಿ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಸಿಎಂಗೆ ಮನವಿ ಸಲ್ಲಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

12 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

13 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

13 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

13 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

13 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago