ಬೆಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಆದೇಶದಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ ನೀಡಿ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಅನ್ಯಮತೀಯ ಪ್ರಾರ್ಥನಾನ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಕುರಿತು ಎದ್ದಿರುವ ಚರ್ಚೆಯ ಕುರಿತು ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದ್ದು, ರಾಜ್ಯದ 757 ಪ್ರಾರ್ಥನ ಕೇಂದ್ರಗಳಿಗೆ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನಾ ಕೇಂದ್ರಗಳಿಗೆ ಸರ್ಕಾರ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನೀಡುತ್ತಿದ್ದ ಅನುದಾನ ತಡೆ ಹಿಡಿದಿದ್ದು, ಇಂದು ಅಧಿಕೃತ ಆದೇಶ ಹೊರಡಿಸಿದೆ.
ಇನಾಂ ರದ್ದತಿ ಕಾಯ್ದೆ 1977 ರ ಪರಿಹಾರಾರ್ಥವಾಗಿ ನೀಡುತ್ತಿರುವ ತಸ್ತಿಕ್ ಮತ್ತು ವರ್ಷಾಸನವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ದೇವಸ್ಥಾನಗಳಿಂದ ನೀಡುವ ಬದಲು, ಇನ್ನು ಮುಂದೆ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಮೂಲಕ ತಸ್ತಿಕ್ ಮತ್ತು ವರ್ಷಾಸನ ನೀಡಲು ಅನುದಾನ ಬಿಡುಗಡೆ ಮಾಡತಕ್ಕದ್ದು ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವರದಿಯನ್ನಾದರಿಸಿ ಸರ್ಕಾರ ಆದೇಶ ನೀಡಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…