ದ . ಕ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಮಾಧ್ಯಮದ ಮೂಲಕ ಹೇಳಿಕೆಯೊಂದನ್ನು ನೀಡಿದ್ದು, ರಾಜ್ಯದಲ್ಲಿ ನಮ್ಮ ಸರಕಾರ ಬರುವ ಮುಂಚೆ ಇಲಾಖೆಯ ಮೂಲಕ ಮಂಜೂರಾಗುತ್ತಿರುವ ತಸ್ತೀಕ್ ಹಣ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಕೂಡ ಬಿಡುಗಡೆ ಮಾಡುತ್ತಿರುವ ಬಗ್ಗೆ ಮಾಹಿತಿ ಒದಗಿದ್ದು, ತಕ್ಷಣ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ಮೂಲಕ ಹಿಂದೂ ಧರ್ಮವನ್ನು ಹೊರತುಪಡಿಸಿ ಅನ್ಯ ಉದ್ದೇಶಗಳಿಗೆ ಬಳಸುತ್ತಿರುವುದನ್ನು ತಡೆಹಿಡಿಯಲು ಸೂಚಿಸಿದ್ದಾರೆ.
ಇತರೆ ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳಿಗೆ ಹಣದ ಅವಶ್ಯಕತೆಯಿದ್ದಲ್ಲಿ, ಆಯಾಯ ಇಲಾಖೆಯ ಜವಾಬ್ದಾರಿ ಹಾಗೂ ಆಯಾ ಇಲಾಖೆಯ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದವರು ತಿಳಿಸಿದ್ದಾರೆ.
ರಾಜ್ಯದಲ್ಲಿ 27ಸಾವಿರಕ್ಕೂ ಹೆಚ್ಚು ಹಿಂದೂ ದೇವಸ್ಥಾನಗಳಿಗೆ ತಸ್ತೀಕ್ ನೀಡಲಾಗುತ್ತಿದ್ದು, ಸುಮಾರು 133 ಕೋಟಿ ರೂಪಾಯಿ ಸರಕಾರ ವಾರ್ಷಿಕ ಅನುದಾನ ಹಂಚುತ್ತಿದೆ. ಈ ಪೈಕಿ ಸುಮಾರು 764 ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳು ಇಲಾಖೆಯಿಂದ ತಸ್ತೀಕ್ ಪಡೆಯುತ್ತಿದ್ದು, ಮಂತ್ರಿಗಳ ಸೂಚನೆ ಮೇರೆಗೆ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಹಣ ಬಿಡುಗಡೆ ಮಾಡುವುದನ್ನು ನಿಲ್ಲಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…