ರಾಜ್ಯ ನ್ಯೂಸ್

ಹಿಂದೂ ಧರ್ಮಕ್ಕೆ ಕಳಂಕ ತಂದ ಕಾಂಗ್ರೆಸ್ ಗೆ ಜನ ಬುದ್ದಿ ಕಲಿಸಬೇಕು: ಅಮಿತ್ ಶಾ

ಬೆಂಗಳೂರು: ಹಿಂದೂ ಭಯೋತ್ಪಾದನೆ– ಕೇಸರಿ ಭಯೋತ್ಪಾದನೆ’ ಎಂದು ಹೇಳುವ ಮೂಲಕ ಕಾಂಗ್ರೆಸ್‌ ನಾಯಕರು ಹಿಂದೂ ಧರ್ಮದ ಪಾವಿತ್ರ್ಯವನ್ನು ಹಾಳು ಮಾಡುತ್ತಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ. ಹಿಂದೂ ಧರ್ಮಕ್ಕೆ ಭಯೋತ್ಪಾದನೆಯ ಕಳಂಕ ಅಂಟಿಸಿದ ಕಾಂಗ್ರೆಸ್‌ ಗೆ  ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ನಡೆದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ  ಮಾತನಾಡಿದ ಅವರು, ಮೆಕ್ಕಾ ಮಸೀದಿ ಬಾಂಬ್‌ ಸ್ಫೋಟದ ಆರೋಪಿಗಳನ್ನು ನಿರ್ದೋಷಿಗಳೆಂದು ನ್ಯಾಯಾಲಯ ಬಿಡುಗಡೆ ಮಾಡಿದೆ. ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಕಾಂಗ್ರೆಸ್‌ ಪಕ್ಷ  ಹಿಂದೂ ಧರ್ಮವನ್ನು ಎಳೆದು ತಂದಿತು. ಧರ್ಮ ಮತ್ತು ಸಂಸ್ಕೃತಿಗೆ ಅವಮಾನ ಮಾಡಿದ ಕಾರಣಕ್ಕೆ ಕರ್ನಾಟಕದ ಜನತೆ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಮನೆ ಬಾಗಿಲಿಗೆ ಮತ ಕೇಳಲು ಬರುವ ಕಾಂಗ್ರೆಸ್ ನಾಯಕರನ್ನು ಈ ಬಗ್ಗೆ ಪ್ರಶ್ನಿಸಬೇಕು ಎಂದು ಶಾ ಹೇಳಿದರು.
ಬಿಜೆಪಿಯ ವಿಜಯರಥ ಕರ್ನಾಟಕ ತಲುಪಿದೆ. ಇಲ್ಲಿ ಪಕ್ಷ ವಿಜಯ ಸಾಧಿಸಲಿದೆ. ಇದರಿಂದ ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಮತ್ತು ತೆಲಂಗಾಣಕ್ಕೆ ದಾರಿ ಮಾಡಲಿದೆ ಎಂದು ಶಾ ತಿಳಿಸಿದರು.
ಭಯೋತ್ಪಾದನೆಗೆ ಯಾವುದೇ ಧರ್ಮ, ಜಾತಿ ಇರುವುದಿಲ್ಲ. ಭಯೋತ್ಪಾದನೆಯೇ ಖಂಡನಾರ್ಹ. ಇದನ್ನು ಅರಿಯದೇ ಹಿಂದೂ ಭಯೋತ್ಪಾದನೆ ಎಂದು ಹೇಳಿಕೆ ನೀಡುವುದು ಸರಿಯಲ್ಲ. ಇನ್ನಾದರೂ ಅವರು ಇಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದರು.
Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago