ಉತ್ತರ ಪ್ರದೇಶ : ಮಗನ ಅಸ್ವಾಭಾವಿಕ ಸಾವನ್ನು ಆತ್ಮಹತ್ಯೆ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡ ಕಾರಣಕ್ಕೆ ತೀವ್ರವಾಗಿ ಮನನೊಂದ ಮುಸ್ಲಿಂ ಕುಟುಂಬವೊಂದು ಹಿಂದು ಧರ್ಮಕ್ಕೆ ಮತಾಂತರಗೊಂಡ ಘಟನೆ ನಡೆದಿದೆ.
ಭದ್ರಾರ್ಕಾ ಎನ್ನುವ ಹಳ್ಳಿಯ ಅಖ್ತರ್ ಎನ್ನುವವರು ಕುಟುಂಬದ 12 ಮಂದಿಯೊಂದಿಗೆ ಹಿಂದೂ ಧರ್ಮ ಸ್ವೀಕರಿಸಿದ್ದಾರೆ. ಮಾತ್ರವಲ್ಲದೆ ಧರ್ಮವನ್ನು ಬದಲಿಸಬೇಕು ಎಂದು ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್‌ಗೆ ಅಫಿದವಿತ್ ಸಲ್ಲಿಸಿದ್ದಾರೆ.
ನಾವು ಧರ್ಮವನ್ನು ಬದಲಾಯಿಸುವುದರಿಂದ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬಹುದು ಎಂದು ಅಖ್ತರ್ ಮಾಧ್ಯಮಗಳೆದುರು ಆಕ್ರೋಶ ಹೊರ ಹಾಕಿದ್ದಾರೆ.
‘ನನ್ನ ಪುತ್ರ ಗುಲ್‌ಹಸನ್ ಅವರು ಕೊಲೆಯಾಗಿದ್ದು, ಪೊಲೀಸರು ಆತ್ಮಹತ್ಯೆ ಎಂದು ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ’ ಎನ್ನುವುದು ಅಖ್ತರ್ ಅವರ ಆರೋಪವಾಗಿದ್ದು, ಮತಾಂತರವಾಗುವ ನ್ಯಾಯ ಪಡೆಯುವ ವಿಶ್ವಾಸ ಅವರದ್ದು.
ಮುಸ್ಲಿಂ ಕುಟುಂಬ ಕೇಸರಿ ಪಟ್ಟಿಗಳನ್ನು ಹಣೆಗೆ ಕಟ್ಟಿಕೊಂಡು ಜೈ ಶ್ರೀರಾಮ್ ಎಂಬ ಘೋಷಣೆಗಳನ್ನು ಕೂಗುತ್ತಾ ಹಿಂದು ಧರ್ಮ ಸ್ವೀಕರಿಸಿದ್ದು ,ಅವರನ್ನು ಹಿಂದೂ ಪರ ಸಂಘಟನೆಯ ಸದಸ್ಯರು ತಿಲಕವಿಟ್ಟು ಬರಮಾಡಿಕೊಂಡಿದ್ದಾರೆ.ಬಳಿಕ ಹವನ ಮಾಡಿಸಿ ಮತ್ತು ಹನುಮಾನ್ ಚಾಲೀಸಾವನ್ನು ಪಠಿಸಲಾಗಿದೆ.
ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿರುವುದು ಹೊಸ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…