Featured

ಹಿಂದೂ ಧರ್ಮಕ್ಕೆ ಮತಾಂತರವಾದ ಮುಸ್ಲಿಂ ಕುಟುಂಬ ; ಪೊಲೀಸ್‌ ಕ್ರಮದ ವಿರುದ್ಧ ನೊಂದು ಹಿಂದು ಧರ್ಮ ಸ್ವೀಕರ..

ಉತ್ತರ ಪ್ರದೇಶ : ಮಗನ ಅಸ್ವಾಭಾವಿಕ ಸಾವನ್ನು ಆತ್ಮಹತ್ಯೆ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡ ಕಾರಣಕ್ಕೆ ತೀವ್ರವಾಗಿ ಮನನೊಂದ ಮುಸ್ಲಿಂ ಕುಟುಂಬವೊಂದು ಹಿಂದು ಧರ್ಮಕ್ಕೆ ಮತಾಂತರಗೊಂಡ ಘಟನೆ ನಡೆದಿದೆ.

ಭದ್ರಾರ್ಕಾ ಎನ್ನುವ ಹಳ್ಳಿಯ ಅಖ್ತರ್‌ ಎನ್ನುವವರು ಕುಟುಂಬದ 12 ಮಂದಿಯೊಂದಿಗೆ ಹಿಂದೂ ಧರ್ಮ ಸ್ವೀಕರಿಸಿದ್ದಾರೆ. ಮಾತ್ರವಲ್ಲದೆ ಧರ್ಮವನ್ನು ಬದಲಿಸಬೇಕು ಎಂದು ಸಬ್‌ ಡಿವಿಷನಲ್‌ ಮ್ಯಾಜಿಸ್ಟ್ರೇಟ್‌ಗೆ ಅಫಿದವಿತ್‌ ಸಲ್ಲಿಸಿದ್ದಾರೆ.

ನಾವು ಧರ್ಮವನ್ನು ಬದಲಾಯಿಸುವುದರಿಂದ ಪೊಲೀಸರು ನಿಷ್ಪಕ್ಷಪಾತ  ತನಿಖೆ ನಡೆಸಬಹುದು ಎಂದು ಅಖ್ತರ್‌ ಮಾಧ್ಯಮಗಳೆದುರು ಆಕ್ರೋಶ ಹೊರ ಹಾಕಿದ್ದಾರೆ.

‘ನನ್ನ  ಪುತ್ರ ಗುಲ್‌ಹಸನ್‌ ಅವರು ಕೊಲೆಯಾಗಿದ್ದು, ಪೊಲೀಸರು ಆತ್ಮಹತ್ಯೆ ಎಂದು ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ’ ಎನ್ನುವುದು ಅಖ್ತರ್‌ ಅವರ ಆರೋಪವಾಗಿದ್ದು, ಮತಾಂತರವಾಗುವ ನ್ಯಾಯ ಪಡೆಯುವ ವಿಶ್ವಾಸ ಅವರದ್ದು.

ಮುಸ್ಲಿಂ ಕುಟುಂಬ ಕೇಸರಿ ಪಟ್ಟಿಗಳನ್ನು ಹಣೆಗೆ ಕಟ್ಟಿಕೊಂಡು ಜೈ ಶ್ರೀರಾಮ್‌ ಎಂಬ ಘೋಷಣೆಗಳನ್ನು ಕೂಗುತ್ತಾ   ಹಿಂದು ಧರ್ಮ ಸ್ವೀಕರಿಸಿದ್ದು ,ಅವರನ್ನು ಹಿಂದೂ ಪರ ಸಂಘಟನೆಯ ಸದಸ್ಯರು ತಿಲಕವಿಟ್ಟು ಬರಮಾಡಿಕೊಂಡಿದ್ದಾರೆ.ಬಳಿಕ ಹವನ ಮಾಡಿಸಿ ಮತ್ತು ಹನುಮಾನ್‌ ಚಾಲೀಸಾವನ್ನು ಪಠಿಸಲಾಗಿದೆ.

ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿರುವುದು ಹೊಸ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.

 

 

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

12 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

12 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

13 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

13 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

13 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

13 hours ago