Featured

ಹಿಂದೂ ಧರ್ಮವನ್ನು ನಾಶಮಾಡಲು ಮೋದಿ ಇರುವವರೆಗೂ ಸಾಧ್ಯವಿಲ್ಲ : ಮೈಸೂರಿನಲ್ಲಿ ಪ್ರಧಾನಿ – Vishwanews24

ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ಹುನ್ನಾರ – ಮೋದಿ ಇರುವವರೆಗೂ ಸಾಧ್ಯವಿಲ್ಲ : ಮೈಸೂರಿನಲ್ಲಿ ಪ್ರಧಾನಿ

ಮೈಸೂರು: ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ನವರು ಹುನ್ನಾರ ನಡೆಸಿದ್ದು ಮೋದಿ ಇರುವವರೆಗೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನ ವಿಜಯಸಂಕಲ್ಪ‌ ಸಮಾವೇಶದಲ್ಲಿ ಮಾತನಾಡಿದ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿ “ನಿಮಗೆಲ್ಲಾ ನನ್ನ ನಮಸ್ಕಾರಗಳು, ಚೈತ್ರ ನವಮಿಯ ದಿನ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ತಾಯಿ ಚಾಮುಂಡೇಶ್ವರಿ ಜೊತೆ, ತಾಯಿ ಭುವನೇಶ್ವರಿ ಮತ್ತು ತಾಯಿ ಕಾವೇರಿಗೆ ನಮಿಸುತ್ತೇನೆ” ಎಂದರು. ಕರ್ನಾಟಕದಲ್ಲಿ ಕಾಂಗ್ರೆಸ್ ತುಷ್ಠೀಕರಣ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ಆಹ್ವಾನವನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ನವರು ಅಪಮಾನ ಮಾಡಿದೆ. ಇಂಡಿ ಮೈತ್ರಿ ಕೂಟವು ಸನಾತನ ಧರ್ಮವನ್ನು ನಾಶ ಮಾಡುತ್ತೇವೆ ಎನ್ನುತ್ತಾರೆ. ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ನವರು ಹುನ್ನಾರ ನಡೆಸಿದ್ದು ಮೋದಿ ಇರುವವರೆಗೂ ಸಾಧ್ಯವಿಲ್ಲ ಎಂದು ಪ್ರಧಾನಿ ಘೋಷಿಸಿದರು.

.ರಾಜ್ಯ ಕಾಂಗ್ರೆಸ್ ಪಕ್ಷದ ಆಡಳಿತ ವೈಖರಿಯನ್ನೂ ತರಾಟೆಗೆ ತೆಗೆದುಕೊಂಡ ಮೋದಿ ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ನಿರಂತರ ವಾಗ್ದಾಳಿ ನಡೆಸಿ, ಬಿಜೆಪಿಯಿಂದ ಮೋದಿಯೇ ಗ್ಯಾರಂಟಿ ಎಂದು ಹೇಳಿದರು. ಇದಕ್ಕೂ ಮೊದಲು ಇಡೀ ಭಾರತದಲ್ಲಿ ಅತ್ಯಂತ ಹೆಚ್ಚು ಅನುಭವಿ ರಾಜಕಾರಣಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಜೊತೆ ವೇದಿಕೆ ಹಂಚಿಕೊಂಡಿರುವುದು ನನ್ನ ಸೌಭಾಗ್ಯ ಅವರು ಹೇಳಿರುವುದನ್ನು ಸಂಪೂರ್ಣವಾಗಿ ಕೇಳಿಸಿಕೊಂಡೆ ಎಂದ ಪ್ರಧಾನಿ ಬಿಜೆಪಿಯಿಂದ ಪ್ರಾದೇಶಿಕ ಅಸ್ಮಿತೆ, ಕನ್ನಡ ಅಸ್ಮಿತೆಗೆ ಧಕ್ಕೆ ಬರುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೂ ತಿರುಗೇಟು ನೀಡಿದ ಅವರು, ಕನ್ನಡವು ಅತ್ಯಂತ ಸುಂದರವಾದ ಭಾಷೆಯಾಗಿದೆ. ಬಿಜೆಪಿ ಸರ್ಕಾರವು ಕನ್ನಡ ಭಾಷೆಯ ಬೆಳವಣಿಗೆಗೆ ಪೂರಕ ಯೋಜನೆಗಳನ್ನು ಹಮ್ಮಿಕೊಳ್ಳಲಿದೆ ಎಂದೂ ತಿಳಿಸಿದರು.

 

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

19 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago