ಮೈಸೂರು: ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ನವರು ಹುನ್ನಾರ ನಡೆಸಿದ್ದು ಮೋದಿ ಇರುವವರೆಗೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿನ ವಿಜಯಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿ “ನಿಮಗೆಲ್ಲಾ ನನ್ನ ನಮಸ್ಕಾರಗಳು, ಚೈತ್ರ ನವಮಿಯ ದಿನ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ತಾಯಿ ಚಾಮುಂಡೇಶ್ವರಿ ಜೊತೆ, ತಾಯಿ ಭುವನೇಶ್ವರಿ ಮತ್ತು ತಾಯಿ ಕಾವೇರಿಗೆ ನಮಿಸುತ್ತೇನೆ” ಎಂದರು. ಕರ್ನಾಟಕದಲ್ಲಿ ಕಾಂಗ್ರೆಸ್ ತುಷ್ಠೀಕರಣ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ಆಹ್ವಾನವನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ನವರು ಅಪಮಾನ ಮಾಡಿದೆ. ಇಂಡಿ ಮೈತ್ರಿ ಕೂಟವು ಸನಾತನ ಧರ್ಮವನ್ನು ನಾಶ ಮಾಡುತ್ತೇವೆ ಎನ್ನುತ್ತಾರೆ. ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ನವರು ಹುನ್ನಾರ ನಡೆಸಿದ್ದು ಮೋದಿ ಇರುವವರೆಗೂ ಸಾಧ್ಯವಿಲ್ಲ ಎಂದು ಪ್ರಧಾನಿ ಘೋಷಿಸಿದರು.
.ರಾಜ್ಯ ಕಾಂಗ್ರೆಸ್ ಪಕ್ಷದ ಆಡಳಿತ ವೈಖರಿಯನ್ನೂ ತರಾಟೆಗೆ ತೆಗೆದುಕೊಂಡ ಮೋದಿ ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ನಿರಂತರ ವಾಗ್ದಾಳಿ ನಡೆಸಿ, ಬಿಜೆಪಿಯಿಂದ ಮೋದಿಯೇ ಗ್ಯಾರಂಟಿ ಎಂದು ಹೇಳಿದರು. ಇದಕ್ಕೂ ಮೊದಲು ಇಡೀ ಭಾರತದಲ್ಲಿ ಅತ್ಯಂತ ಹೆಚ್ಚು ಅನುಭವಿ ರಾಜಕಾರಣಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಜೊತೆ ವೇದಿಕೆ ಹಂಚಿಕೊಂಡಿರುವುದು ನನ್ನ ಸೌಭಾಗ್ಯ ಅವರು ಹೇಳಿರುವುದನ್ನು ಸಂಪೂರ್ಣವಾಗಿ ಕೇಳಿಸಿಕೊಂಡೆ ಎಂದ ಪ್ರಧಾನಿ ಬಿಜೆಪಿಯಿಂದ ಪ್ರಾದೇಶಿಕ ಅಸ್ಮಿತೆ, ಕನ್ನಡ ಅಸ್ಮಿತೆಗೆ ಧಕ್ಕೆ ಬರುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೂ ತಿರುಗೇಟು ನೀಡಿದ ಅವರು, ಕನ್ನಡವು ಅತ್ಯಂತ ಸುಂದರವಾದ ಭಾಷೆಯಾಗಿದೆ. ಬಿಜೆಪಿ ಸರ್ಕಾರವು ಕನ್ನಡ ಭಾಷೆಯ ಬೆಳವಣಿಗೆಗೆ ಪೂರಕ ಯೋಜನೆಗಳನ್ನು ಹಮ್ಮಿಕೊಳ್ಳಲಿದೆ ಎಂದೂ ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…