ದಾವಣಗೆರೆ : ರಾಜ್ಯದಲ್ಲಿ ಹಿಂದೂಗಳಿಗೆ ಸ್ವಾತಂತ್ರ್ಯವಿಲ್ಲ. ರಾಗಿಗುಡ್ಡದ ಹಿಂದೂ ಸಮುದಾಯದವರಿಗೆ ಸಾಂತ್ವನ ಹೇಳಲು ಹೊರಟಿದ್ದೆ. ನಾನೇನು ಅಲ್ಲಿ ಪ್ರಚೋದನಕಾರಿ ಭಾಷಣ ಮಾಡಲು ಹೊರಟಿರಲಿಲ್ಲ. ನಮ್ಮದು ಎಂತ ಕರ್ಮ ನೋಡಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದ ರಾಗಿಗುಡ್ಡಕ್ಕೆ ತೆರಳುತ್ತಿದ್ದ ಪ್ರಮೋದ್ ಮುತಾಲಿಕ್ ಅವರನ್ನು ಶಿವಮೊಗ್ಗದ ಮಾಸ್ತಿಕಟ್ಟೆ ಬಳಿ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದರು. ಪ್ರಚೋದನಕಾರಿ ಭಾಷಣ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮೋದ್ ಮುತಾಲಿಕ್ ಅವರನ್ನು ಬಂಧಿಸಿದ ಪೊಲೀಸರು ಅವರನ್ನು ಶಿವಮೊಗ್ಗ ಗಡಿ ದಾಟಿಸಿ ದಾವಣಗೆರೆಗೆ ತಂದು ಬಿಟ್ಟಿದ್ದರು. ಪೊಲೀಸರ ನಡೆಯನ್ನು ಪ್ರಮೋದ್ ಮುತಾಲಿಕ್ ಖಂಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಪೊಲೀಸರು ನನ್ನ ಬಸ್ ಟ್ರೇಸ್ ಮಾಡಿ ಬಂಧಿಸಿದ್ದಾರೆ. ಬೆಳಗ್ಗೆ 6 ಗಂಟೆಗೆ ದಾವಣಗೆರೆಗೆ ತಂದು ಬಿಟ್ಟಿದ್ದಾರೆ. ನಾನೇನು ಶಿವಮೊಗ್ಗದ ರಾಗಿಗುಡ್ಡದಲ್ಲಿ ಪ್ರಚೋದನಕಾರಿ ಭಾಷಣ ಮಾಡಲು ಹೊರಟಿರಲಿಲ್ಲ. ನಮ್ಮದು ಎಂತ ಕರ್ಮ ನೋಡಿ ಎಂದ ಪ್ರಮೋದ್ ಮುತಾಲಿಕ್ ಅವರು, ಕಾಂಗ್ರೆಸ್ ಹಿಂದು ವಿರೋಧಿ ಎನ್ನುವುದು ಇದರಿಂದ ಸ್ಪಷ್ಟ ಆಗಿದೆ ಎಂದರು.
ಹಿಂದೂ ನಾಯಕರು ಮತ್ತು ಸಂಘಟನೆಗಳ ನಾಯಕರ ಮೇಲೆ ಕೇಸ್ ಹಾಕುವುದು. ಹಿಂದೂ ನಾಯಕರನ್ನ ಹತ್ತಿಕ್ಕುವುದು ಸರ್ಕಾರದ ಉದ್ದೇಶ ಆಗಿದೆ. ಅಧಿಕಾರಕ್ಕೆ ಬಂದಾಗಿನಿಂದ ಕಾಂಗ್ರೆಸ್ ಇದನ್ನೇ ಮಾಡುತ್ತಿದೆ. ನನ್ನ ಬಂಧಿಸಿರುವ ಸರ್ಕಾರದ ನೀತಿ ಖಂಡನೀಯ. ರಾಗಿಗುಡ್ಡಕ್ಕೆ 15 ದಿನ ಹೋಗದಂತೆ ನಿರ್ಬಂಧ ಹಾಕಿದೆ. ಇದು ಕಾಂಗ್ರೆಸ್ ಸರ್ಕಾರದ ನೀತಿ ಎಂದು ಹೇಳಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…