ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ, ವಿಶ್ವ ಹಿಂದೂ ಪರಿಷತ್ ಮುಖಂಡ ಜಗದೀಶ್ ಶೇಣವ ಮತ್ತು ಶರಣ್ ಪಂಪುವೆಲ್ ಅವರನ್ನು ಆತ್ಮಹತ್ಯಾ ದಾಳಿಯ ಮೂಲಕ ಹತ್ಯೆ ಮಾಡುವ ಸಂಚು ನಡೆಸಲಾಗಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ನಿಜಕ್ಕೂ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.
ರಾಜ್ಯ ಸರಕಾರವೂ ಕೂಡಲೇ ಜಾಗೃತವಾಗಿ ಎಲ್ಲಾ ಹಿಂದೂ ನಾಯಕರ ರಕ್ಷಣೆಗೆ ಸೂಕ್ತ ಭದ್ರತೆ ನೀಡಬೇಕು, ಸೂಕ್ಷ್ಮ ಪ್ರದೇಶವಾದ ಕರಾವಳಿ ಜಿಲ್ಲೆಯಲ್ಲಿ ಏನಾದರೂ ಅನಾಹುತವಾದರೆ ಅದಕ್ಕೆ ರಾಜ್ಯ ಸರಕಾರವೇ ನೇರ ಹೊಣೆಯಾಗಲಿದ್ದು ಜಿಲ್ಲೆಯ ಶಾಂತಿ ಕದಡದಂತೆ ಮುಂಜಾಗೃತೆ ವಹಿಸಬೇಕು.
ಸ್ವತಃ ಗುಪ್ತಚರ ಇಲಾಖೆಯನ್ನು ಹೊಂದಿರುವ ಮುಖ್ಯಮಂತ್ರಿಗಳು ಪ್ರಕರಣದ ಗಂಭೀರತೆಯನ್ನು ಅರಿತು ಆಧುನಿಕ ತಂತ್ರಜ್ಞಾನವನ್ನು ಬಳಸಿ ಆತ್ಮಹತ್ಯಾ ದಾಳಿಯ ಸಂಚಿನ ಮೂಲವನ್ನು ಶೋಧಿಸಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶಾಸಕರು ಮನವಿ ಮಾಡಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…