Featured

ಹಿಂದೂ ಮಹಾಗಣಪತಿ ಶೋಭಯಾತ್ರೆಗೆ ಹರಿದುಬಂದ ಕೇಸರಿಪಡೆ ; ಕೋಟೆನಗರಿ ಕೇಸರಿಮಯ

ಚಿತ್ರದುರ್ಗ: ಹಿಂದೂ ಮಹಾಗಣಪತಿಯ ವಿಸರ್ಜನೆಯ ಅಂಗವಾಗಿ ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಶನಿವಾರ ಆಯೋಜಿಸಿದ್ದ ಶೋಭಯಾತ್ರೆಗೆ ಜನಸಾಗರವೇ ಹರಿದು ಬಂದಿತ್ತು. ಸಾವಿರಾರು ಜನರ ಭಕ್ತಿಯ ಮೆರವಣಿಗೆಯಲ್ಲಿ ಸಾಗಿದ ವಿಘ್ನೇಶನ ಮೂರ್ತಿ ಚಂದ್ರವಳ್ಳಿ ಕೆರೆಯಲ್ಲಿ ಲೀನವಾಯಿತು.

ಕೇಸರಿ ಬಟ್ಟೆ, ಭಗವಾಧ್ವಜಗಳಿಂದ ಕಂಗೊಳಿಸುತ್ತಿದ್ದ ಕೋಟೆ ನಗರಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಶೋಭಯಾತ್ರೆ ಸಾಗುವ ಮಾರ್ಗಗಳು ತಳಿರು ತೋರಣಗಳಿಂದ ಸಿಂಗಾರಗೊಂಡಿದ್ದವು. ಸುಮಾರು ನಾಲ್ಕು ಕಿ.ಮೀ ದೂರದ ಶೋಭಯಾತ್ರೆಯ ಮಾರ್ಗದಲ್ಲಿ ಒಂದೂವರೆ ಕಿ.ಮೀ. ವರೆಗೂ ಜನರು ಕಿಕ್ಕಿರಿದು ನಿಂತಿದ್ದರು. ಇದು ಮೈಸೂರು ದಸರಾ ಉತ್ಸವದ ಜಂಬೂಸವಾರಿಯನ್ನು ನೆನಪಿಸುವಂತಿತ್ತು.

ಜಿಲ್ಲಾ ಕ್ರೀಡಾಂಗಣ ರಸ್ತೆಯ ಆಂಜನೇಯಸ್ವಾಮಿ ದೇಗುಲದ ಮುಂಭಾಗದಲ್ಲಿ ಗಣಪತಿಯ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶೋಭಯಾತ್ರೆಗೆ ಚಾಲನೆ ನೀಡಲಾಯಿತು. ಬೃಹತ್‌ ಗಾತ್ರದ ಗಣೇಶಮೂರ್ತಿಯ ಮೇಲೆ ಪುಷ್ಪ ವೃಷ್ಠಿ ಸುರಿಯುತ್ತಿದ್ದಂತೆ ಜನರು ಭಕ್ತಿಯ ಪರಾಕಾಷ್ಠೆಗೆ ತಲುಪಿದರು. ‘ಗಣಪತಿ ಭಪ್ಪ ಮೋರೆಯಾ..’ ಎಂಬ ಘೋಷಣೆ ಮೊಳಗಿಸಿದರು. ಕೋಟೆ ನಾಡಿನಲ್ಲಿ ಈ ಘೋಷಣೆ ತಡರಾತ್ರಿಯವರೆಗೂ ಅನುರಣಿಸಿತು.

ಕೋಟೆನಗರಿ ಕೇಸರಿಮಯ :ಶೋಭಯಾತ್ರೆಯ ಅಂಗವಾಗಿ ಕೋಟೆ ನಗರಿ ಸಂಪೂರ್ಣ ಕೇಸರಿಮಯವಾಗಿತ್ತು. ಭಗವಾಧ್ವಜ, ಬಟ್ಟಿಂಗ್ಸ್ ಹಾಗೂ ಕೇಸರಿ ಬಟ್ಟೆಗಳಿಂದ ಮೆರವಣಿಗೆ ಸಾಗುವ ಮಾರ್ಗಗಳನ್ನು ಅಲಂಕರಿಸಲಾಗಿತ್ತು. ಸುಮಾರು 10 ಸಾವಿರ ಮೀಟರ್‌ ಬಟ್ಟೆ, 3 ಸಾವಿರಕ್ಕೂ ಹೆಚ್ಚು ಕೇಸರಿ ಬಾವುಟಗಳು ಬಿ.ಡಿ ರಸ್ತೆ ಹಾಗೂ ಹೊಳಲ್ಕೆರೆ ಮಾರ್ಗದಲ್ಲಿ ರಾರಾಜಿಸುತ್ತಿದ್ದವು. ಹೀಗಾಗಿ, ಇಡೀ ನಗರ ಕೇಸರಿಯ ಬಣ್ಣಕ್ಕೆ ತಿರುಗಿತ್ತು.

ಮೂಡಣದಲ್ಲಿ ಉದಯಿಸಿದ ಸೂರ್ಯ ಮೇಲೆ ಬರುತ್ತಿದ್ದಂತೆ ಪ್ರಮುಖ ರಸ್ತೆಗಳಲ್ಲಿ ಜನಸಾಗರ ಹರಿದು ಬರಲು ಆರಂಭವಾಯಿತು. ಕೇಸರಿ ಶಾಲು, ಪೇಟ ಧರಿಸಿದ್ದ ಬಹುತೇಕ ಯುವಕರು ದ್ವಿಚಕ್ರ ವಾಹನ, ಕಾರುಗಳಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದರು. ಶೋಭಯಾತ್ರೆ ಶುರುವಾಗುತ್ತಿದ್ದಂತೆ ಬಿ.ಡಿ ರಸ್ತೆ ಕಿಕ್ಕಿರಿದು ತುಂಬಿತು.

ಶ್ರೀರಾಮ, ಹನುಮಂತ, ಲಕ್ಷ್ಮಣ, ಸೀತೆ ಸೇರಿ ಪೌರಾಣಿಕ ವ್ಯಕ್ತಿಗಳ ವೇಷ ಧರಿಸಿದ್ದ ಅನೇಕರು ಜನರ ಗಮನ ಸೆಳೆಯುತ್ತಿದ್ದರು. ವೀರ ಮದಕರಿ ನಾಯಕ, ವಿಷ್ಣುವರ್ಧನ್‌ ವೇಷಧಾರಿಗಳು ಅಲ್ಲಲ್ಲಿ ಕಾಣಿಸಿಕೊಂಡರು. ಇವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಸಾರ್ವಜನಿಕರು ಮುಗಿಬೀಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಡಿ.ಜೆ. ಹಾಡಿಗೆ ಯುವಕರ ಹೆಜ್ಜೆ : ಶೋಭಯಾತ್ರೆಗೆ ಕೊನೆಯ ಕ್ಷಣದಲ್ಲಿ ಮೂರು ಡಿ.ಜೆ ಬಳಕೆಗೆ ಜಿಲ್ಲಾಡಳಿತ ಅನುಮತಿ ನೀಡಿತ್ತು. ಮೆರವಣಿಗೆಯ ಉದ್ದಕ್ಕೂ ಇದ್ದ ಡಿ.ಜೆಗಳ ಸಮೀಪ ಸಾವಿರಾರು ಜನರು ಕಿಕ್ಕಿರಿದು ನಿಂತಿದ್ದರು. ಹಾಡು ಹೊರಹೊಮ್ಮುತ್ತಿದ್ದಂತೆ ಯುವ ಸಮೂಹ ಹುಚ್ಚೆದ್ದು ಕುಣಿಯುತ್ತಿತ್ತು. ಈ ಸಮೂಹವನ್ನು ನಿಯಂತ್ರಿಸಲು ಪೊಲೀಸರು ಹಾಗೂ ಸಂಘಪರಿವಾರದ ಕಾರ್ಯಕರ್ತರು ಕಷ್ಟಪಡುತ್ತಿದ್ದರು. ಅಲ್ಲಲ್ಲಿ ಯುವತಿಯರೂ ಹೆಜ್ಜೆ ಹಾಕುವ ಮೂಲಕ ಯುವಕರ ಹೃದಯಗಳಿಗೆ ಕಚಗುಳಿ ಇಡುತ್ತಿದ್ದರು.

ಬೆಳಿಗ್ಗೆ 11ಕ್ಕೆ ಆರಂಭವಾದ ಈ ಡಿ.ಜೆಗಳು ನಿರಂತರವಾಗಿ ಗಾನಸುಧೆಯನ್ನು ಉಣಬಡಿಸಿದವು. ನೃತ್ಯಕ್ಕೆ ಪ್ರೇರಣೆ ನೀಡುವ ಹಾಡುಗಳು ಹೊರಹೊಮ್ಮಿದವು. ಕನ್ನಡ, ಹಿಂದಿ ಸಿನಿಮಾದ ಬಹುತೇಕ ಹಾಡುಗಳಿಗೆ ಯುವ ಸಮೂಹ ನೃತ್ಯ ಪ್ರದರ್ಶಿಸಿತು. ಒಂದೊಂದು ಡಿ.ಜೆ. ಸಮೀಪ ಸುಮಾರು 10 ಸಾವಿರ ಜನ ಕುಣಿಯುತ್ತಿದ್ದರು.

ಶೋಭಯಾತ್ರೆಗೆ ಪೊಲೀಸರು ಸರ್ಪಗಾವಲು ನಿರ್ಮಿಸಿದ್ದರು. ಪೂರ್ವ ವಲಯದ ಐಜಿಪಿ ಬಿ.ದಯಾನಂದ ನೇತೃತ್ವದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿತ್ತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಾಥ್‌ ಎಂ.ಜೋಶಿ ಹಾಗೂ ಹಾವೇರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪರಶುರಾಮ್‌ ಭದ್ರತೆಯ ಹೊಣೆಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದರು. ಮೂವರು ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪಡೆಯ (ಕೆಎಸ್‌ಆರ್‌ಪಿ) 15 ತುಕಡಿ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ (ಡಿಎಆರ್‌) 9 ತುಕಡಿ ಸೇರಿದಂತೆ 3,500 ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿತ್ತು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago